
ಪ್ರಗತಿವಾಹಿನಿ ಸುದ್ದಿ: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಅಮಾನತುಗೊಂಡಿದ್ದ ಐವರು ಪೊಲೀಸ್ ಅಧಿಕಾರಿಗಳ ಅಮಾನತು ಆದೇಶವನ್ನು ರಾಜ್ಯ ಸರ್ಕಾರ ಹಿಂಪಡೆದಿದೆ.
ಆರ್ ಸಿಬಿ ಸಂಭ್ರಮಾಚರಣೆ ವೇಳೆ ಜೂನ್ 4ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ಸಂಭವಿಸಿ 11 ಜನರು ಸಾವನ್ನಪ್ಪಿದ್ದರು. ಪ್ರಕರಣ ಸಂಬಂಧ ಕರ್ತವ್ಯಲೋಪ ಆರೋಪದಲ್ಲಿ ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ್ ಸೇರಿದಂತೆ ಹಲವು ಪೊಲಿಸ್ ಅಧಿಕಾರಿಗಳ ಅಮಾನತುಗೊಳಿಸಲಾಗಿತ್ತು.
ಇದೀಗ ರಾಜ್ಯ ಸರ್ಕಾರ ಅಮಾನತುಗೊಂಡಿದ್ದ ಪೊಲೀಸ್ ಅಧಿಕಾರಿಗಳಾದ ಬಿ.ದಯಾನಂದ್, ಹೆಚ್ಚುವರಿ ಪೊಲೀಸ್ ಕಮಿಷನರ್ ವಿಕಾಸ್ ಕುಮಾರ್, ಕೇಂದ್ರ ವಿಭಾಗದ ಡಿಸಿಪಿ ಶೇಖರ್, ಎಸಿಪಿ ಸಿ.ಬಾಲಕೃಷ್ಣ, ಇನ್ಸ್ ಪೆಕ್ಟರ್ ಎ..ಕೆ.ಗಿರೀಶ್ ಅವರ ಅಮಾನತು ಆದೇಶ ವಾಪಸ್ ಪಡೆದಿದೆ.
ಈ ಎಲ್ಲರ ವಿರುದ್ಧ ನಿಯಮ ಪ್ರಕಾರ ಶಿಸ್ತುಕ್ರಮ ಕೈಗೊಳ್ಳುವುದನ್ನು ಬಾಕಿ ಇರಿಸಿ ಕರ್ತವ್ಯಕ್ಕೆ ಮರಳಿ ನೇಮಕ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಖೆ ಆದೇಶ ಹೊರಡಿಸಿದೆ.