Politics

*ರಾಜ್ಯ ಸರ್ಕಾರದ ವಿರುದ್ಧ ತೀವ್ರಗೊಂಡ ಬಿಜೆಪಿ ಪ್ರತಿಭಟನೆ: ಸಿಎಂ, ಡಿಸಿಎಂ ರಾಜೀನಾಮೆಗೆ ಆಗ್ರಹ*

ಪ್ರಗತಿವಾಹಿನಿ ಸುದ್ದಿ: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ದುರಂತ ಸಂಭವಿ 11 ಜನರು ಸಾವನ್ನಪ್ಪಿದ ಘಟನೆ ಖಂಡಿಸಿ ವಿಪಕ್ಷ ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ಪ್ರತಿಭಟನೆ ತೀವ್ರಗೊಳಿಸಿದ್ದಾರೆ.

ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸುತ್ತಿರುವ ಬಿಜೆಪಿ ನಾಯಕರು, ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನೆಯಲ್ಲಿ ವಿಪಕ್ಷ ನಾಯಕ ಆರ್.ಅಶೋಕ್, ಶಾಸಕ ಅಶ್ವತ್ಥನಾರಾಯಣ, ಸಿ.ಟಿ.ರವಿ, ಸಂಸದರು, ಶಾಸಕರು, ಎಂಎಲ್ ಸಿಗಳು ಪಾಲ್ಗೊಂಡಿದ್ದಾರೆ.

ಈ ವೇಳೆ ಮಾತನಾಡಿದ ಆರ್.ಅಶೋಕ್, ರಾಜ್ಯ ಸರ್ಕಾರದ ಬೇಜವಾಬ್ದಾರಿಗೆ ಇಂದು 11 ಜನರು ಬಲಿಯಾಗಿದ್ದಾರೆ. ಅಮಾಯಕರ ಪ್ರಾಣಕ್ಕೆ ಬೆಲೆ ಇಲ್ಲವೇ? ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ದುರಂತದ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button