Karnataka News

*ಚಿನ್ನಸ್ವಾಮಿ ಸ್ಟೇಡಿಯಂಗೆ ಭೇಟಿ ನೀಡಿದ ಸಿಐಡಿ ಅಧಿಕಾರಿಗಳು: ದುರಂತದ ತನಿಖೆ ಆರಂಭ*

ಪ್ರಗತಿವಾಹಿನಿ ಸುದ್ದಿ: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ದುರಂತದಲ್ಲಿ 11 ಜನರು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖೆ ಆರಂಭಗೊಂಡಿದೆ.

ಸಿಐಡಿ ಅಧಿಕಾರಿಗಳು ಇಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂಗೆ ಭೇಟಿ ನೀಡಿ, ಘಟನಾ ಸ್ಥಳಗಳನ್ನು ಪರಿಶೀಲನೆ ನಡೆಸಿದರು. ಜೂನ್ ೪ ರಂದು ಆರ್ ಸಿಬಿ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ಸಂಭವಿಸಿ 11 ಜನ ಅಭಿಮಾನಿಗಳು ಮೃತಪಟ್ಟಿದ್ದರು. ಪ್ರಕರಣವನ್ನು ಸಿಐಡಿ ತನಿಖೆಗೆ ಹಾಗೂ ನ್ಯಾಯಾಂಗ ತನಿಖೆಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಹಿನ್ನೆಲೆಯಲ್ಲಿ ಡಿಜಿ & ಐಜಿಪಿ ಕಚೇರಿ, ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಸಿಐಡಿಗೆ ಪ್ರಕರಣ ಹಸ್ತಾಂತರಿಸಿದ್ದು, ಸಿಐಡಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ.

Home add -Advt

Related Articles

Back to top button