Kannada NewsKarnataka News
ಹಿಂದುಳಿದ ಗ್ರಾಮಕ್ಕೆ ಅಭಿವೃದ್ಧಿಯ ಸ್ಪರ್ಶ

ಹಿಂದುಳಿದ ಗ್ರಾಮಕ್ಕೆ ಅಭಿವೃದ್ಧಿಯ ಸ್ಪರ್ಶ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ –
ಹಲವಾರು ವರ್ಷಗಳಿಂದ ಅಭಿವೃದ್ಧಿಯನ್ನೇ ಕಾಣದ ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಂಗ್ರಾಳಿ ಬಿ ಕೆ ಗ್ರಾಮದಲ್ಲಿ ಅಭಿವೃದ್ಧಿಯ ಹೊಸ ಶಕೆ ಆರಂಭವಾಗಿದೆ.
ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಗ್ರಾಮಕ್ಕೆ ಹಲವಾರು ಅಭಿವೃದ್ಧಿ ಕಾಮಗಾರಿಗಳನ್ನು ತಂದಿದ್ದು, ಗ್ರಾಮಸ್ಥರೇ ಅವುಗಳಿಗೆ ಚಾಲನೆ ನೀಡಿದ್ದಾರೆ.
ಲಕ್ಷ್ಮಿ ಹೆಬ್ಬಾಳಕರ್ ಬೆಂಗಳೂರಿನಲ್ಲಿರುವುದರಿಂದ ಗ್ರಾಮದಲ್ಲಿ ವಿವಿಧ ಕಾಮಗಾರಿಗಳಾದ ವ್ಯಾಯಮ ಶಾಲೆಯ ನಿರ್ಮಾಣ (Gym), ಹೊಸ ಬಸ್ ನಿಲ್ದಾಣ, ಗ್ರಾಮದ ಕನ್ನಡ ಹಾಗೂ ಮರಾಠಿ ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ಗಳ ಸೇವೆ ಹಾಗೂ ಭೈರವನಾಥ ದೇವಸ್ಥಾನದ ಜೀರ್ಣೋದ್ಧಾರ ಮುಂತಾದ ಕಾಮಗಾರಿಗಳಿಗೆ ಚಾಲನೆ ನೀಡಲಾಯಿತು.
ಮೃಣಾಲ ಹೆಬ್ಬಾಳಕರ್ ಉಪಸ್ಥಿತಿಯಲ್ಲಿ ಗ್ರಾಮದ ಮುಖಂಡರು, ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರು, ಸದಸ್ಯರು ಹಾಗೂ ಗ್ರಾಮದ ಜನರೆಲ್ಲಾ ಸೇರಿ ಅಧಿಕೃತವಾಗಿ ಚಾಲನೆಯನ್ನು ನೀಡಿದರು.




