
ಪ್ರಗತಿವಾಹಿನಿ ಸುದ್ದಿ: ಮಾನಸಾದೇವಿ ದೇವಸ್ಥಾನದಲ್ಲಿ ಭೀಕರ ಕಾಲ್ತುಳಿತ ಸಂಭವಿಸಿ 7 ಜನರು ಮೃತಪಟ್ಟಿರುವ ಘಟನೆ ಉತ್ತರಾಖಂಡದ ಹರಿದ್ವಾದಲ್ಲಿ ನಡೆದಿದೆ.
ಇಂದು ಬೆಳಿಗ್ಗೆ ಮಾನಸಾದೇವಿ ದೇವಸ್ಥಾನಕ್ಕೆ ಅಪಾರಪ್ರಮಾಣದಲ್ಲಿ ಭಕ್ತರು ಬಂದಿದ್ದರು. ದೇವಸ್ಥಾನದ ಮುಂದೆ ನೂಕು ನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿದೆ. ಘಟನೆಯಲ್ಲಿ 7 ಜನರು ಸಾವನ್ನಪ್ಪಿದ್ದಾರೆ, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




