National

*ಹತ್ರಾಸ್ ನಲ್ಲಿ ಕಾಲ್ತುಳಿತ; 27 ಜನರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಕಾಲ್ತುಳಿತ ಸಂಭವಿಸಿ ಮಹಿಳೆಯರು, ಮಕ್ಕಳು ಸೇರಿದಂತೆ 27 ಜನರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ನಡೆದಿದೆ.

ಭೋಲೆ ಬಾಬಾ ಸಂತ್ಸಂಗ ಕಾರ್ಯಕ್ರಮದಲ್ಲಿ ಈ ದುರಂತ ಸಂಭವಿಸಿದೆ ಎನ್ನಲಾಗಿದೆ. ಹತ್ರಾಸ್ ನ ಗ್ರಾಮದಲ್ಲಿ ಸತ್ಸಂಗ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವೇಳೆ ಏಕಾಏಕಿ ಕಾಲ್ತುಳಿತ ಸಂಭವಿಸಿದೆ.

ಘಟನೆಯಲ್ಲಿ ಇಬ್ಬರು ಪುರುಷರು, ಮೂವರು ಮಕ್ಕಳು, 22 ಮಹಿಳೆಯರು ಸೇರಿ 27 ಜನರು ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲವರ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.


Related Articles

Back to top button