ಪ್ರಗತಿ ವಾಹಿನಿ ಸುದ್ದಿ ಬೆಳಗಾವಿ –
ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯವರೆಗೂ ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳುವುದಾಗಿ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಹೇಳಿದರು.
ಬೆಳಗಾವಿಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ಮುಖಂಡರು ರಾಜ್ಯಾಧ್ಯಂತ ಎಲ್ಲ ಜಿಲ್ಲೆಗಳಿಗೆ ಭೇಟಿ ನೀಡುತ್ತೇವೆ. ಕಾರ್ಯಕರ್ತರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿ ಪಕ್ಷವನ್ನು ಬಲಪಡಿಸುವ ಸಲುವಾಗಿ ಚರ್ಚಿಸಲಾಗುವುದು. ಅವರ ಸಲಹೆಗಳನ್ನು ಪಡೆದು ಮುಂದೆ ಏನು ಮಾಡಬಹುದು ಎಂಬ ತೀರ್ಮಾನ ತೆಗೆದುಕೊಳ್ಳುತ್ತೇವೆ. ಇದು ಪಕ್ಷ ಸಂಘಟನೆಯ ಪ್ರವಾಸದ ಪ್ರಾರಂಭವಾಗಿದೆ ಎಂದು ವಿವರಿಸಿದರು.
ಬೆಳಗಾವಿ ಜಿಲ್ಲೆಯಲ್ಲಿ ಬಿಜೆಪಿಯಲ್ಲಿ ಬಣ ರಾಜಕೀಯ ನಡೆಯುತ್ತಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಯಡಿಯೂರಪ್ಪ, ಎಲ್ಲ ಭಿನ್ನಾಭಿಪ್ರಾಯಗಳನ್ನೂ ಪಕ್ಷದಲ್ಲಿ ಆಂತರಿಕವಾಗಿ ಚರ್ಚಿಸಿ ಬಗೆಹರಿಸಲಾಗುವುದು ಎಂದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಹಿಂದೂ ಮುಸ್ಲಿಮರು ಒಂದೇ ತಾಯಿಯ ಮಕ್ಕಳಂತೆ ಬಾಳಬೇಕು ಎಂಬುದು ಪ್ರಧಾನಿ ನರೇಂದ್ರ ಮೋದಿಯವರ ಅಪೇಕ್ಷೆಯಾಗಿದ್ದು ಅದರಂತೆ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ರಾಜ್ಯ ಸರಕಾರವೂ ನಡೆದುಕೊಳ್ಳುತ್ತ ಬಂದಿದೆ. ಅಲ್ಲಲ್ಲಿ ಕೆಲವು ಸಣ್ಣ ಪುಟ್ಟ ಘಟನೆಗಳು ನಡೆದಿದ್ದು ಶಾಮತಿ ಸೌಹಾರ್ಧತೆಗೆ ಭಂಗ ತರುವವರ ಮೇಲೆ ಮುಖ್ಯಮಂತ್ರಿಗಳು ಬಿಗಿ ಕ್ರಮ ಕೈಗೊಳ್ಳುತ್ತಾರೆ ಎಂಬ ವಿಶ್ವಾಸವಿದೆ ಎಂದರು.
ಏ.16ರಂದು ಭಾಸ್ಕರ್ ರಾವ್ ಬೆಳಗಾವಿಗೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ