Latest

ರಾಜ್ಯ ಸಚಿವ ಸಂಪುಟ ವಿಸ್ತರಣೆ ಮತ್ತೆ ಮುಂದಕ್ಕೆ: ದಿನಾಂಕ ಘೋಷಿಸಿದ ಸಿಎಂ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ದಿನಾಂಕ ನಿಗದಿಯಾಗಿದೆ. ಫೆಬ್ರವರಿ 6 ರಂದು ಗುರುವಾರ ಸಂಪುಟ ವಿಸ್ತರಣೆ ಮಾಡುವುದಾಗಿ ಸಿಎಂ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿ ನಡೆಸಿದ ಸಿಎಂ ಯಡಿಯೂರಪ್ಪ, ಸಂಪುಟ ವಿಸ್ತರಣೆಯ ದಿನಾಂಕವನ್ನು ಪ್ರಕಟಿಸಿದರು. ಫೆ.6 ರಂದು ಬೆಳಗ್ಗೆ 10.30ಕ್ಕೆ ರಾಜಭವನದಲ್ಲಿ ಪ್ರತಿಜ್ಞಾವಿಧಿ ಕಾಅರ್ಯಕ್ರಮ ನಡೆಯಲಿದೆ ಎಂದರು.

Home add -Advt

ನಾವು ಕೊಟ್ಟ ಭರವಸೆಯನ್ನು ಈಡೇರಿಸುತ್ತೇವೆ. ಉಪ ಚುನಾವಣೆಯಲ್ಲಿ ಗೆದ್ದ 10 ಶಾಸಕರಿಗೆ ಸಚಿವ ಸ್ಥಾನ ನೀಡಲಾಗುವುದು. ಶಾಸಕರಿಗೆ ಯಾರಿಗೂ ನಾವು ಮೋಸ ಮಾಡುವುದಿಲ್ಲ ಎಂದಿದ್ದಾರೆ. ಇನ್ನು ಸೋತವರಿಗೆ ಸುಪ್ರೀಂ ಕೋರ್ಟ್‌ ಆದೇಶದ ಪ್ರಕಾರ ಸಚಿವ ಸ್ಥಾನ ನೀಡಲು ಸಾಧ್ಯವಿಲ್ಲ ಎಂದು ಬಿಎಸ್‌ವೈ ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ.

ಇನ್ನು ಆರ್. ಶಂಕರ್‌ಗೆ ಭರವಸೆ ನೀಡಿದಂತೆ ಎಂಎಲ್‌ಸಿ ಮಾಡುತ್ತೇವೆ. ಮುಂದಿನ ದಿನಗಳಲ್ಲಿ ಅವರಿಗೆ ಸಚಿವ ಸ್ಥಾನ ನೀಡಲಾಗುವುದು ಎಂದು ಹೇಳಿದರು.

Related Articles

Back to top button