
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸ್ವಪಕ್ಷದ ಸಚಿವರ ವಿರುದ್ಧ ಕಾಂಗ್ರೆಸ್ ಶಾಸಕರು ಅಸಮಾಧಾನ ವ್ಯಕ್ತಪಡಿಸಿ ಪತ್ರ ಬರೆದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಹೈಕಮಾಂಡ್ ಮಧ್ಯಪ್ರವೇಶ ಮಾಡಿದ್ದು, ರಾಜ್ಯ ಕಾಂಗ್ರೆಸ್ ನಾಯಕರಿಗೆ ಬುಲಾವ್ ನೀಡಿದೆ.
ಶಾಸಕರು, ಹಿರಿಯ ಕಾಂಗ್ರೆಸ್ ನಾಯಕರು ಸೇರಿ 25 ಜನರಿಗೆ ದೆಹಲಿಗೆ ಬರುವಂತೆ ಹೈಕಮಾಂಡ್ ಬುಲಾವ್ ನೀಡಿದೆ ಎಂದು ತಿಳಿದುಬಂದಿದೆ. ರಾಜ್ಯ ಕಾಂಗ್ರೆಸ್ ನಾಯಕರಲ್ಲಿ ಅಸಮಾಧಾನ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಹೈಕಮಾಂಡ್ ಸಭೆ ನಡೆಸಲು ತೀರ್ಮಾನಿಸಿದೆ.
ಕಾಂಗ್ರೆಸ್ ನ ಪ್ರಮುಖ ಸಚಿವರು, ಶಾಸಕರು ಸೇರಿದಂತೆ ಹಲವು ನಾಯಕರು ಆಗಸ್ಟ್ 2ರಂದು ದೆಹಲಿಗೆ ಬರುವಂತೆ ಸೂಚಿಸಲಾಗಿದೆ.
ಶಾಸಕರು ಸಚಿವರ ವಿರುದ್ಧ ಅಸಮಾಧಾನಗೊಂಡು ದೂರು ನೀಡಿ ಪತ್ರ ಬರೆದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಶಾಸಕಾಂಗ ಸಭೆ ಕರೆದು, ಶಾಸಕರ ಮುನಿಸು ತಣಿಸಲು ಯತ್ನಿಸಿದ್ದರು. ಇದೇ ವಿಚಾರವಾಗಿ ಶಾಸಕರ ಸಮಸ್ಯೆ ಬಗ್ಗೆ ಚರ್ಚಿಸಲು ಇದೀಗ ಹೈಕಮಾಂಡ್ ರಾಜ್ಯ ನಾಯಕರಿಗೆ ದೆಹಲಿಗೆ ಬರುವಂತೆ ಕರೆ ನೀಡಿದೆ ಎಂದು ತಿಳಿದುಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ