
ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿಗಳ ಗಮನಕ್ಕೆ ತರದೇ ಯಾವುದೇ ಇಲಾಖೆಯಲ್ಲಿ ವರ್ಗಾವಣೆ ಮಾಡುವಂತಿಲ್ಲ ಎಂದು ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ.
ಇನ್ಮುಂದೆ ಯಾವುದೇ ಇಲಾಖೆಯಲ್ಲಿ ವರ್ಗಾವಣೆ ಮಾಡಬೇಕಾದರೂ ಪೂರ್ವಾನುಮತಿ ಕಡ್ಡಾಯವಾಗಿದೆ. ಮುಖ್ಯಮಂತ್ರಿಗಳ ಗಮನಕ್ಕೆ ತರದೇ ವರ್ಗಾವಣೆ ಮಾಡುವಂತಿಲ್ಲ. ಸಾರ್ವತ್ರಿಕ ವರ್ಗಾವಣೆ ಅವಧಿ ಮುಗಿದಿರುವುದರಿಂದ ಇನ್ಮುಂದೆ ಯಾವುದೇ ಇಲಾಖೆಯಲ್ಲಿ ವರ್ಗಾವಣೆಗಳನ್ನು ಆಡಳಿತ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಅಗತ್ಯವಿದ್ದರೆ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಅವರ ಪೂರ್ವಾನುಮೋದನೆ ಇದ್ದರೆ ಮಾತ್ರ ಮಾಡಬಹುದು.
ಒಂದುವೇಳೆ ಪೂರ್ವಾನುಮೋದನೆ ಇಲ್ಲದೇ ವರ್ಗಾವಣೆ ಮಾಡಿದರೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ, ಇಲಾಖೆಯ ಮುಖ್ಯಸ್ಥರನ್ನೇ ನೇರ ಹೊಣೆಗಾರರನ್ನಾಗಿ ಮಾಡಿ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಸುತ್ತೋಲೆ ಹೊರಡಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ