*101 ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಿದ ರಾಜ್ಯ ಸರ್ಕಾರ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮಳೆ ಕೊರತೆಯ 101 ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ರಾಜ್ಯ ಸರ್ಕಾರ ಅಧಿಕೃತವಾಗಿ ಘೋಷಿಸಿದೆ.  ಮಾಧ್ಯಮಗಳಿಗೆ ಮಾಹಿತಿ ನೀಡಿದ ಉಪಮುಖ್ಯಮಂತ್ರಿ ಜಿ. ಪರಮೇಶ್ವರ್, ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ತಿಳಿಸಿದರು. ಮಳೆ ಕೊರತೆಯಿಂದ ಕೃಷಿ ಹಾಗೂ ನೀರಾವರಿ ವ್ಯವಸ್ಥೆ ಮೇಲೆ ಪರಿಣಾಮ ಬೀರಿದ್ದು, ಕೆಲವು ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯೂ ತಲೆದೋರಿದೆ ಎಂದರು. ಬರ ಪರಿಸ್ಥಿತಿಯನ್ನು ನಿಭಾಯಿಸಲು ರಾಜ್ಯ ಸರ್ಕಾರ 635 ಕೋಟಿ ರೂಪಾಯಿಗಳನ್ನು ಮೀಸಲಿಟ್ಟಿದೆ. ಈ ಅನುದಾನವನ್ನು … Continue reading *101 ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಿದ ರಾಜ್ಯ ಸರ್ಕಾರ*