
ಸರ್ಕಾರಕ್ಕೆ ಧನ್ಯವಾದ ತಿಳಿಸಿದ ಷಡಕ್ಷರಿ
ಪ್ರಗತಿವಾಹಿನಿ ಸುದ್ದಿ: ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಆದೇಶ ಹೊರಡಿಸಿದೆ. ಈ ಮೂಲಕ ಸರ್ಕಾರಿ ನೌಕರರಿಗೆ ದೀಪಾವಳಿ ಕೊಡುಗೆ ನೀಡಿದೆ.
ಸರ್ಕಾರಿ ನೌಕರರಿಗೆ ದಿನಾಂಕ 1-7-2025ರಿಂದ ಅನ್ವಯವಾಗುವಂತೆ ಶೇ.2ರಷ್ಟು ತುಟ್ಟಿಭತ್ಯೆ ಹೆಚ್ಚಿಸುವ ಕಡತಕ್ಕೆ ಸಿಎಂ ಸಿದ್ದರಾಮಯ್ಯ ಅನುಮೋದನೆ ನೀಡಿದ್ದಾರೆ. ಮುಂದಿನ ಎರಡು ಮೂರು ದಿನಗಳಲ್ಲಿ ಈ ಬಗ್ಗೆ ಅಧಿಕೃತ ಆದೇಶ ಹೊರಬೀಳಲಿದೆ.
ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳಕ್ಕೆ ಅನುಮೋದನೆ ನೀಡಿರುವುದಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಧನ್ಯವಾದ ತಿಳಿಸಿದ್ದಾರೆ.