EducationKannada NewsKarnataka News

*ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಶಾಕ್ ನೀಡಿದ ರಾಜ್ಯ ಸರ್ಕಾರ*

ಪ್ರಗತಿವಾಹಿನಿ ಸುದ್ದಿ: 2025-26ನೇ ಸಾಲಿನಲ್ಲಿ ನಡೆಯುವ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕವನ್ನು ಪರಿಷ್ಕರಣೆ ಮಾಡಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಆದೇಶ ಹೋರಡಿಸಿದ್ದು, ಪರೀಕ್ಷಾ ಶುಲ್ಕ ಹೆಚ್ಚಿಸಿ  ವಿದ್ಯಾರ್ಥಿಗಳಿಗೆ ಶಾಕ್ ನೀಡಿದೆ.

ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯ ನಿರ್ಣಯ ಮಂಡಲಿಯಿಂದ ನಡೆಸಲಾಗುವ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಸಂಬಂಧಪಟ್ಟಂತೆ ನೋಂದಣಿಯಾಗುವ ವಿದ್ಯಾರ್ಥಿಗಳಿಂದ ಉಲ್ಲೇಖಿತ-1ರ ಸರ್ಕಾರದ ಆದೇಶದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷಾ ಶುಲ್ಕವನ್ನು ಶೇಕಡಾ 5 ರಷ್ಟು ಪ್ರತಿ ವರ್ಷ ಹೆಚ್ಚಿಸಿ ಪರಿಷ್ಕರಿಸಲು ಆದೇಶಿಸಲಾಗಿದೆ.

2025- 26ನೇ ಸಾಲಿಗೆ ಪರೀಕ್ಷಾ ನೋಂದಣಿಗೆ ಅರ್ಜಿಗಳನ್ನು ಆಹ್ವಾನಿಸುವ ಹಿನ್ನೆಲೆ 2025-26ರ ಸಾಲಿನಲ್ಲಿ ನಡೆಯಲಿರುವ ಪರೀಕ್ಷೆಗಳಿಗೆ ಪ್ರಸ್ತುತ ಇರುವ ದರಕ್ಕೆ ಶೇಕಡಾ 5 ರಷ್ಟು ಸೇರಿಸಿ ಪರೀಕ್ಷಾ ಶುಲ್ಕವನ್ನು ಪರಿಷ್ಕರಿಸಿದೆ.

ಎಸ್ ಎಸ್ ಎಲ್ ಸಿ ಪರೀಕ್ಷಾ ಶುಲ್ಕ (CCERF & CCEPF) ವಿದ್ಯಾರ್ಥಿಗಳು- ರೂ.676 ಇದ್ದ ಶುಲ್ಕವನ್ನು ರೂ.710ಕ್ಕೆ ಏರಿಕೆ ಮಾಡಲಾಗಿದೆ. ಹೊಸದಾಗಿ ನೋಂದಣಿಯಾಗುವ ಖಾಸಗಿ ಅಭ್ಯರ್ಥಿಗಳ ನೋಂದಣಿ ಶುಲ್ಕ ಹಾಗೂ ಅರ್ಜಿ ಶುಲ್ಕವನ್ನು ರೂ.236ರಿಂದ ರೂ.248ಕ್ಕೆ ಹೆಚ್ಚಳ ಮಾಡಲಾಗಿದೆ.

Home add -Advt

ಈಗಾಗಲೇ ಖಾಸಗಿ ಅಭ್ಯರ್ಥಿಯಾಗಿ ನೋಂದಣಿಯಾಗಿ ಪರೀಕ್ಷಾ ಶುಲ್ಕ ಪಾವತಿಸಿದ ಅಭ್ಯರ್ಥಿಗಳ ನೋಂದಣಿ ನವೀಕರಣ ಶುಲ್ಕವನ್ನು ರೂ.69 ಇದ್ದದ್ದು ರೂ.72ಕ್ಕೆ ಹೆಚ್ಚಿಸಲಾಗಿದೆ.

ಪುನರಾವರ್ತಿ ಶಾಲಾ, ಖಾಸಗಿ ಅಭ್ಯರ್ಥಿಗಳ ಪರೀಕ್ಷಾ ಶುಲ್ಕ ಒಂದು ವಿಷಯಕ್ಕೆ ರೂ.427 ಇದ್ದದ್ದು ರೂ.448ಕ್ಕೆ ಏರಿಸಲಾಗಿದೆ. ಎರಡು ವಿಷಯಕ್ಕೆ ರೂ.532 ಇದ್ದದ್ದನ್ನು ರೂ.559ಕ್ಕೆ ಹೆಚ್ಚಳ ಮಾಡಲಾಗಿದೆ. ಮೂರು ಮತ್ತು ಮೂರಕ್ಕಿಂತ ಹೆಚ್ಚಿನ ವಿಷಯಗಳಿಗೆ ರೂ.716 ಇದ್ದ ಶುಲ್ಕವನ್ನು ರೂ.752ಕ್ಕೆ ಹೆಚ್ಚಿಸಲಾಗಿದೆ.

Related Articles

Back to top button