ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಈ ಹಿಂದಿನ ಬಿಜೆಪಿ ಸರಕಾರ ಪರಿಷ್ಕರಿಸಿದ್ದ ಶಾಲಾ ಪಠ್ಯಪುಸ್ತಕಗಳನ್ನು ಪುನರ್ ಪರಿಷ್ಕರಿಸಲು ರಾಜ್ಯ ಸರಕಾರ ಮುಂದಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾರ್ಗದರ್ಶನದಲ್ಲಿ ಮಕ್ಕಳ ಹಿತದೃಷ್ಟಿಯಿಂದ ಪಠ್ಯಪುಸ್ತಕಗಳನ್ನು ಪರಿಷ್ಕರಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ವಿಧಾನಸೌಧದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಪಠ್ಯ ಪುಸ್ತಕ ಪರಿಷ್ಕರಣೆ ಈಗಾಗಲೇ ಒಂದು ಹಂತಕ್ಕೆ ಬಂದಿದೆ. ಶಾಲಾ ತರಗತಿಗಳು ಪೂರ್ಣ ಪ್ರಮಾಣದಲ್ಲಿ ಪ್ರಾರಂಭಗೊಳ್ಳಲು ಇನ್ನೂ 15 ದಿನಗಳು ಬೇಕು. ಮಕ್ಕಳಿಗೆ ತೊಂದರೆಯಾಗದ ರೀತಿಯಲ್ಲಿ ಪಠ್ಯಪರಿಷ್ಕರಣೆ ಮಾಡಲಾಗುತ್ತದೆ. ಯಾವ ಪಾಠಗಳನ್ನು ಕೈಬಿಡಬೇಕು ಎಂಬ ಬಗ್ಗೆ ಸ್ಪಷ್ಟ ನಿರ್ಧಾರ ಇನ್ನೂ ತಳೆಯಬೇಕಿದೆ ಎಂದರು.
ರೋಹಿತ್ ಚಕ್ರತೀರ್ಥ ವಿರುದ್ಧ ದೂರು ದಾಖಲಿಸುವ ಕುರಿತು ಮಾತನಾಡಿದ ಅವರು, ನಮ್ಮ ಆದ್ಯತೆ ಮೊದಲು ಪಠ್ಯಪುಸ್ತಕ ಬದಲಾವಣೆ. ಆ ಬಗ್ಗೆ ನಂತರದಲ್ಲಿ ಮಾತನಾಡುತ್ತೇನೆ ಎಂದರು.
https://pragati.taskdun.com/belgaum-constable-and-three-arrested-for-deceiving-to-exchange-notes-of-2000-rs/
https://pragati.taskdun.com/gangster-chhota-rajan-moved-court-against-scoop-web-series/
https://pragati.taskdun.com/man-stands-naked-on-table-at-vatican-church-to-protest-ukraine-war/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ