Latest

ರಾಜ್ಯ ಸರ್ಕಾರಿ ನೌಕರರಿಗೂ ತುಟ್ಟಿಭತ್ಯೆ ಹೆಚ್ಚಳಕ್ಕೆ ಮನವಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಳ ಬೆನ್ನಲ್ಲೇ ರಾಜ್ಯ ಸರ್ಕಾರಿ ನೌಕರರ ಸಂಘ ನೌಕರರ ತುಟ್ಟಿಭತ್ಯೆ ಹೆಚ್ಚಿಸುವಂತೆ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ಮಾಡಿದೆ.

ಅಖಿಲ ಭಾರತ ಬೆಲೆ ಸೂಚ್ಯಂಕವನ್ನಾಧರಿಸಿ ಕೇಂದ್ರ ಸರ್ಕಾರ ತನ್ನ ನೌಕರರಿಗೆ ತುಟ್ಟಿಭತ್ಯೆ ಮಂಜೂರು ಮಾಡುವುದ ದಿನಾಂಕದಿಂದಲೇ ಅನ್ವಯವಾಗುವಂತೆ ಕರ್ನಾಟಕ ಸರ್ಕಾರ ಕೂಡ ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಿಸುವುದು ಸಂಪ್ರದಾಯ. ಅದೇ ರೀತಿ ರಾಜ್ಯ ಸರ್ಕಾರವೂ ಯುಗಾದಿ ಹಬ್ಬದ ಕೊಡುಗೆಯಾಗಿ ಜ.1ರಿಂದ ಅನ್ವಯವಾಗುವಂತೆ ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಿಸಿ ಆದೇಶ ಹೊರಡಿಸಬೇಕು ಎಂದು ಒತ್ತಾಯಿಸಿದೆ.

Home add -Advt

ರಾಜ್ಯ ಸರ್ಕಾರಿ ನೌಕರರಿಗೂ ಶೇ.3ರಷ್ಟು ತುಟ್ಟಿಭತ್ಯೆ ಬಿಡುಗಡೆ ಮಾಡಬೇಕು ಎಂದು ಕರ್ನಾಟಕ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಕ್ಷರಿ ಸಿಎಂ ಬೊಮ್ಮಾಯಿ ಅವರಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.
ಬಿಜೆಪಿ ಸೇರ್ಪಡೆ ಖಚಿತ ಪಡಿಸಿದ ಸಭಾಪತಿ ಹೊರಟ್ಟಿ

Related Articles

Back to top button