ಇಲ್ಲಿರುವ ಲಿಂಕ್ ಮೂಲಕ ಡೌನ್ ಲೋಡ್ ಮಾಡಿಕೊಳ್ಳಿ
ಪ್ರಗತಿವಾಹಿನಿ ಸುದ್ದಿ: ರಾಜ್ಯ ಸರ್ಕಾರಿ ನೌಕರರಿಗೆ ಕೆಂಪು -ಹಳದಿ ಬಣ್ಣದ ಗುರುತಿನ ಚೀಟಿ ಟ್ಯಾಗ್ ಕಡ್ಡಾಯವಾಗಿದೆ ಎಂದು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
ನಮ್ಮ ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣಗೊಳಿಸಿ 50 ವರ್ಷಗಳು ಪೂರೈಸಿರುವ ಹಿನ್ನೆಲೆಯಲ್ಲಿ ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಈ ಅಭಿಯಾನದ ಅಡಿಯಲ್ಲಿ ರಾಜ್ಯದ ಎಲ್ಲಾ ಸರ್ಕಾರಿ ನೌಕರರು ಕೆಂಪು-ಹಳದಿ ಬಣ್ಣದ ಗುರುತಿನ ಚೀಟಿ ಟ್ಯಾಗ್ ಧರಿಸುವುದು ಕಡ್ಡಾಯವಾಗಿದೆ ಎಂದು ಸಿಬ್ಬಂದಿ ಹಾಗೂ ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸಂದೀಪ್ ಬಿ.ಕೆ.ಸುತ್ತೋಲೆ ಹೊರಡಿಸಿದ್ದಾರೆ.
ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳು, ನಿಗಮ, ಮಂಡಳಿ, ನಿರ್ದೇಶನಾಲಯ, ಆಯುಕ್ತಾಲಯ ಇತ್ಯಾದಿ ಸರ್ಕಾರಿ ಮತ್ತು ಸರ್ಕಾರಿ ಸ್ವಾಮ್ಯದ ಕಚೇರಿಗಳಲ್ಲಿ ಕರ್ತವ್ಯ ನಿರ್ವಹಿಸುವ ಅಧಿಕಾರಿಗಳು, ಸಿಬ್ಬಂದಿ ತಮ್ಮ ಇಲಾಖೆ, ಸಂಸ್ಥೆಯ ಗುರುತಿನ ಚೀಟಿ ಧರಿಸಲು ಅನುವಾಗುವಂತೆ ಕೆಂಪು-ಹಳಿದಿ ಬಣ್ಣದ ಕೊರಳುದಾರವನ್ನು ಒದಗಿಸಲು ಸೂಚನೆ ನೀಡಲಾಗಿದೆ.
ನೂತನ ಕೊರಳು ದಾರ ವಿನ್ಯಾಸವನ್ನು https://photos.app.goo.gl/YcJeNHnDNPecW8Q48 ಆನ್ ಲೈನ್ ವಿಳಾಸದಿಂದ ಡೌನ್ ಲೋಡ್ ಮಾಡಿಕೊಳ್ಳಬಹುದು ಎಂದು ತಿಳಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ