
ಪ್ರಗತಿವಾಹಿನಿ ಸುದ್ದಿ: ರಾಜ್ಯ ಸರ್ಕಾರದ ವಕ್ತಾರರನ್ನಾಗಿ ಐವರು ಸಚಿವರನ್ನು ನೇಮಕ ಮಾಡಲಾಗಿದೆ.
ರಾಜ್ಯ ಕಾಂಗ್ರೆಸ್ ಸರ್ಕಾರದ ಸಾಧನೆ, ಕಾರ್ಯವೈಖರಿ ಹಾಗೂ ಯೋಜನೆಗಳನ್ನು ಜನರಿಗೆ ತಿಳಿಸುವ ಹಾಗೂ ತಲುಪಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಐವರು ಸಚಿವರನ್ನು ಸರ್ಕಾರದ ವಕ್ತಾರರನ್ನಾಗಿ ನೇಮಕ ಮಾಡಿದ್ದಾರೆ.
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಕಂದಾಯ ಸಚಿವ ಕೃಷ್ಣಬೈರೇಗೌಡ, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ, ಅರಣ್ಯ ಸಚಿವ ಈಶ್ವರ ಖಂಡ್ರೆ, ಹಾಗೂ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರನ್ನು ನೇಮಕ ಮಾಡಲಾಗಿದೆ.
ಈ ಐವರು ಸಚಿವರಿಗೆ ಕಾಲ ಕಲಾಕ್ಕೆ ದಾಖಲೆಗಳನ್ನು, ಮಾಹಿತಿಗಳನ್ನು ಒದಗಿಸುವಂತೆ ಎಲ್ಲಾ ಇಲಾಖೆಗಳಿಗೂ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ