Belagavi NewsBelgaum NewsPolitics

*ತೆರಿಗೆ ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ: ಡಿ.ಕೆ ಸುರೇಶ್*

ಪ್ರಗತಿವಾಹಿನಿ ಸುದ್ದಿ: ತೆರಿಗೆ ಹಂಚಿಕೆ ವಿಚಾರದಲ್ಲಿ ನಮ್ಮ ರಾಜ್ಯಕ್ಕೆ ಮೋಸ ಆಗಿದೆ ಎಂದು ಮಾಜಿ ಸಂಸದ ಡಿ.ಕೆ ಸುರೇಶ್ ಕಿಡಿಕಾರಿದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತೆರಿಗೆ ಹಂಚಿಕೆ ವಿಚಾರಕ್ಕೆ ಸಂಬಂಧಿಸಿ ಮಾತನಾಡಿದರು. ಈ ಹಿಂದೆಯೂ ನಾನು ತೆರಿಗೆ ಹಂಚಿಕೆ ಬಗ್ಗೆ ಮಾತನಾಡಿದ್ದೆ. ಈಗ ಪುನಃ ಅವರು ಅದೇ ರೀತಿ ಮಾಡಿದ್ದಾರೆ ಎಂದು ಕಿಡಿಕಾರಿದರು.

ದಕ್ಷಿಣ ಭಾರತಕ್ಕೆ 28,152 ಕೋಟಿ ರೂಪಾಯಿ ನೀಡಿದೆ. ಉತ್ತರ ಪ್ರದೇಶಕ್ಕೆ ಮಾತ್ರ 32 ಸಾವಿರ ಕೋಟಿ ರೂ. ಕೊಟ್ಟಿದ್ದಾರೆ. ಕೇಂದ್ರ ಸರ್ಕಾರವು ನಮ್ಮ ರಾಜ್ಯಕ್ಕೆ ತಾರತಮ್ಯ ಮಾಡುತ್ತಿದೆ. ಇದನ್ನು ತಕ್ಷಣವೇ ಪರಿಶೀಲಿಸಿ ದಕ್ಷಿಣ ಭಾರತದ ರಾಜ್ಯಗಳನ್ನು ಒಟ್ಟಿಗೆ ತೆಗೆದುಕೊಂಡು ಹೋಗಬೇಕು ಎಂದು ಒತ್ತಾಯಿಸಿದರು.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button