Kannada NewsKarnataka NewsNationalPolitics

*ರಾಜ್ಯ ವಿಧಾನ ಪರಿಷತ್ ಚುನಾವಣೆ: ಹೆಸರು ಘೋಷಿಸಿದ ಬಿಜೆಪಿ*

ಪ್ರಗತಿವಾಹಿನಿ ಸುದ್ದಿ: ಮುಂಬರುವ ವಿಧಾನ ಪರಿಷತ್ ಚುನಾವಣೆಗೆ ತಯಾರಿ ನಡೆಸುತ್ತಿರುವ ಬಿಜೆಪಿ ಪಕ್ಷ ಖಾಲಿ ಇರುವ ಸ್ಥಾನಗಳಿಗೆ ತನ್ನ ಮೊದಲ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 

ಬಿಜೆಪಿ ಚುನಾವಣಾ ಸಮಿತಿ ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ಈಶಾನ್ಯ ಶಿಕ್ಷಕರ ಕ್ಷೇತ್ರದಿಂದ ಮಾಜಿ ಪರಿಷತ್ ಸದಸ್ಯರಾದ ಶಶೀಲ್ ನಮೋಶಿ ಅವರಿಗೆ ಮತ್ತೊಮ್ಮೆ ಅವಕಾಶ ನೀಡಲಾಗಿದೆ. ಶಿಕ್ಷಣ ಕ್ಷೇತ್ರದಲ್ಲಿ ಅವರ ಅನುಭವ ಮತ್ತು ಪ್ರಭಾವವನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಲಾಗಿದೆ.

Home add -Advt

ಇತ್ತ ಪೂರ್ವ ಪದವೀಧರ ಕ್ಷೇತ್ರದಲ್ಲಿ ಎಸ್.ವಿ. ಸಂಕನೂ‌ರ್ ಅವರನ್ನು ಸ್ಪರ್ಧೆಗೆ ಇಳಿಸಲಾಗಿದ್ದು, ಪದವೀಧರರ ಸಮಸ್ಯೆಗಳ ಬಗ್ಗೆ ಅವರು ಹಿಂದೆ ನಡೆಸಿದ ಹೋರಾಟಕ್ಕೆ ಮಹತ್ವ ನೀಡಲಾಗಿದೆ. ಆಗ್ನೆಯ ಪದವೀಧರ ಕ್ಷೇತ್ರಕ್ಕೆ ಕೆ.ಎಂ. ಸುರೇಶ್ ಅವರನ್ನು ಆಯ್ಕೆ ಮಾಡುವ ಮೂಲಕ ಹೊಸ ಮುಖಕ್ಕೆ ಪಕ್ಷ ಅವಕಾಶ ನೀಡಿದೆ.

Related Articles

Back to top button