

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಭಾರತ ಚುನಾವಣಾ ಆಯೋಗದಿಂದ ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಯುಕ್ತ ನೀಡುವ ಅತ್ಯುತ್ತಮ ಜಿಲ್ಲಾ ಚುನಾವಣಾಧಿಕಾರಿ ಪ್ರಶಸ್ತಿಯನ್ನು ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರಿಗೆ ಪ್ರದಾನ ಮಾಡಲಾಯಿತು.
ಭಾರತ ಚುನಾವಣಾ ಆಯೋಗ ಮತ್ತು ಮುಖ್ಯ ಚುನಾವಣಾಧಿಕಾರಿಗಳು, ಕರ್ನಾಟಕ ಕಚೇರಿ ವತಿಯಿಂದ ಬೆಂಗಳೂರಿನ ಸರ್ ಪುಟ್ಟಣ್ಣ ಚೆಟ್ಟಿ ಟೌನ್ ಹಾಲ್ ನಲ್ಲಿ ಇಂದು (ಜ.25) ಏರ್ಪಡಿಸಲಾಗಿದ್ದ 13ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಶಸ್ತಿ ಪ್ರದಾನ ಮಾಡಿದರು.
ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಮನೋಜಕುಮಾರ್ ಮೀನಾ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಕಾಗವಾಡ ತಹಸೀಲ್ದಾರ ರಾಜೇಶ ಬುರ್ಲಿ ಅವರಿಗೆ ಸಹಾಯಕ ಮತದಾರರ ನೋಂದಣಾಧಿಕಾರಿ ವಿಭಾಗದಲ್ಲಿ ಪ್ರಶಸ್ತಿ ಸ್ವೀಕರಿಸಿದರು.
ಮತದಾರರ ನೋಂದಣಿ, ಪರಿಷ್ಕರಣೆ ಸೇರಿದಂತೆ ಒಟ್ಟಾರೆ ಚುನಾವಣಾ ಕಾರ್ಯವನ್ನು ಅತ್ಯುತ್ತಮವಾಗಿ ನಿರ್ವಹಿಸಿರುವುದನ್ನು ಪರಿಗಣಿಸಿ ವಿವಿಧ ವಿಭಾಗಗಳಲ್ಲಿ ಈ ಪ್ರಶಸ್ತಿಯನ್ನು ನೀಡಲಾಗಿರುತ್ತದೆ.
*ಮತದಾರರಿಗೆ ತಲಾ 6000 ರೂ. ಆಮಿಷ ಒಡ್ಡಿದ ರಮೇಶ್ ಜಾರಕಿಹೊಳಿ ವಿರುದ್ಧ ಕಾಂಗ್ರೆಸ್ ದೂರು*
*ಮತದಾರರಿಗೆ ತಲಾ 6000 ರೂ. ಆಮಿಷ ಒಡ್ಡಿದ ರಮೇಶ್ ಜಾರಕಿಹೊಳಿ ವಿರುದ್ಧ ಕಾಂಗ್ರೆಸ್ ದೂರು*
*ಆರೋಗ್ಯ ಇಲಾಖೆಯಲ್ಲಿ 3000 ಕೋಟಿ ಹಗರಣ; ಸಚಿವ ಸುಧಾಕರ್ ವಿರುದ್ಧ ಗಂಭೀರ ಆರೋಪ*
*ಆರೋಗ್ಯ ಇಲಾಖೆಯಲ್ಲಿ 3000 ಕೋಟಿ ಹಗರಣ; ಸಚಿವ ಸುಧಾಕರ್ ವಿರುದ್ಧ ಗಂಭೀರ ಆರೋಪ*
ಶ್ರೀ ಬ್ರಹ್ಮಲಿಂಗೇಶ್ವರ ಮಂದಿರ ನಿರ್ಮಾಣಕ್ಕೆ ಭೂಮಿಪೂಜೆ
