*ಉಪನ್ಯಾಸಕರು ಸಂಘಟಿತರಾಗಿ ಹೋರಾಡಿದಾಗ ಮಾತ್ರ ತಮ್ಮ ಬೇಡಿಕೆಗಳನ್ನು ಈಡೇರಿಸಿಕೊಳ್ಳಲು ಸಾಧ್ಯ: ಎಸ್.ವಿ ಸಂಕನೂರ್*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಉಪನ್ಯಾಸಕರು ಸಂಘಟಿತರಾಗಿ ಹೋರಾಡಿದಾಗ ಮಾತ್ರ ತಮ್ಮ ಬೇಡಿಕೆಗಳನ್ನು ಈಡೇರಿಸಿಕೊಳ್ಳಲು ಸಾಧ್ಯ ಎಂದು ವಿಧಾನ ಪರಿಷತ್ ಸದಸ್ಯ ಎಸ್.ವಿ ಸಂಕನೂರ್ ಹೇಳಿದರು.
ಬೆಳಗಾವಿ ಶಿವಬಸವ ನಗರದ ಶಿವಕುಮಾರ ಸಂಬರಗಿ ಮಠ ಸಭಾಭವನದಲ್ಲಿ ಆಯೋಜಿಸಿದ್ದ ರಾಜ್ಯ ಪದವಿ ಪೂರ್ವ ವಿದ್ಯಾಲಯಗಳು ಜಿಲ್ಲಾ ಘಟಕದ ಉದ್ಘಾಟನೆ ಹಾಗೂ ಶೈಕ್ಷಣಿಕ ಸಮ್ಮೇಳನ ಮತ್ತು ನೌಕರರ ಸಮಸ್ಯೆ ಕುರಿತು ಚರ್ಚೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಪಿಯು ಉಪನ್ಯಾಸಕರು ಸಮಸ್ಯೆಗಳಿಗೆ ಸಂಘಟಿತರಾಗಿ ಹೋರಾಡಿ:
ಉಪನ್ಯಾಸಕರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದು, ಅವುಗಳ ಪರಿಹಾರಕ್ಕಾಗಿ ಎಲ್ಲರೂ ಸಂಘಟಿತರಾಗಿ ಹೋರಾಟ ನಡೆಸಬೇಕು. ಪ್ರತಿ ಜಿಲ್ಲೆಯ ಪದವಿ ಪೂರ್ವ ಮಹಾವಿದ್ಯಾಲಯಗಳ ನೌಕರರ ಸಂಘಗಳು ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸಿ ಸರ್ಕಾರದ ಗಮನ ಸೆಳೆಯಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಕರೆ ನೀಡಿದರು.
ಶಿಕ್ಷಣ ಕ್ಷೇತ್ರಕ್ಕೆ ಸರ್ಕಾರಗಳು ಸೂಕ್ತ ಆದ್ಯತೆ ನೀಡುತ್ತಿಲ್ಲ:
ಬಜೆಟ್‌ನಲ್ಲಿ ಶಿಕ್ಷಣಕ್ಕೆ ಅಗತ್ಯವಾದ ಅನುದಾನವನ್ನು ಮೀಸಲಿಡುತ್ತಿಲ್ಲ. ಶಾಲಾ ಶಿಕ್ಷಣ ಇಲಾಖೆಯಲ್ಲಿ ಸುಮಾರು 79 ಸಾವಿರ ಹುದ್ದೆಗಳು ಖಾಲಿ ಇದ್ದರೂ, ಕೇವಲ 15 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಮುಂದಾಗಿದೆ. ಆದರೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ನೇಮಕಾತಿ ಕುರಿತು ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ. ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಹಲವು ವರ್ಷಗಳಿಂದ ನೇಮಕಾತಿ ನಡೆಯದಿರುವುದು ಶಿಕ್ಷಣದ ಗುಣಮಟ್ಟದ ಮೇಲೂ ಪರಿಣಾಮ ಬೀರುತ್ತಿದೆ ಎಂದು ಅವರು ಹೇಳಿದರು.ಮಹಾವಿದ್ಯಾಲಯಗಳ ನೌಕರ ಸಂಘಗಳು ಒಗ್ಗಟ್ಟಿನಿಂದ ಹೋರಾಡಿದಾಗ ಮಾತ್ರ ಸಮಸ್ಯೆಗಳನ್ನು ಬಗೆಹರಿಸಬಹುದು. ಸರಕಾರವನ್ನು ಎಚ್ಚರಿಸುವ ಕೆಲಸ ಸಂಘಟನೆಗಳು ಮಾಡಬೇಕು ಎಂದರು. ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಬರ್ತಿಗೆ ಘೋಷಿಸಿರುವಂತೆ ಹಳೆ ಪಿಂಚಣಿ ಯೋಜನೆ ಜಾರಿಗೆ ತರಬೇಕು ಎಂದರು.
ಕಾರ್ಯಕ್ರಮದ ದಿವ್ಯ ಸಾನ್ನಿಧ್ಯ ವಹಿಸಿದ್ದ ತೋಂಟದಾರ್ಯ ಸಂಸ್ಥಾನ ಮಠದ ಡಾ. ತೋಂಟದ ಸಿದ್ಧರಾಮ ಸ್ವಾಮೀಜಿ ಮಾತನಾಡಿ, ಶೈಕ್ಷಣಿಕ ಕ್ಷೇತ್ರದಲ್ಲಿ ಸಾವಿರಾರು ಹುದ್ದೆಗಳು ಖಾಲಿ ಇರುವುದು ವಿಷಾದನೀಯ. ಶಿಕ್ಷಕರು ಮತ್ತು ಉಪನ್ಯಾಸಕರ ಹಿತಕ್ಕಾಗಿ ತಜ್ಞರು ರೂಪಿಸಿರುವ ವರದಿಗಳನ್ನು ಸರ್ಕಾರಗಳು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ವಿಶೇಷವಾಗಿ ಗಡಿ ಭಾಗದ ಜಿಲ್ಲೆಗಳಲ್ಲಿ ಶಿಕ್ಷಕರ ಕೊರತೆಯಾಗದಂತೆ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು.
ದೇಶದ ಅಭಿವೃದ್ಧಿಗಾಗಿ ಶಿಕ್ಷಣ ಆರೋಗ್ಯ, ಕೃಷಿಗೆ ಸರಕಾರ ಹೆಚ್ಚಿನ ಆದ್ಯತೆ ನೀಡಬೇಕು. ಉಪನ್ಯಾಸಕರು ತಮ್ಮ ಬೇಡಿಕೆಗಳ ಈಡೇರಿಕೆಗೆ ಹೋರಾಟ ಹೋರಾಟ ಅಗತ್ಯ ಎಂದು ದಿವ್ಯ ಸಾನಿಧ್ಯ ವಹಿಸಿದ ಡಾಕ್ಟರ್ ಸಿದ್ದರಾಮ ಸ್ವಾಮೀಜಿ ನಾಗನೂರು ರುದ್ರಾಕ್ಷಿ ಮಠ ಬೆಳಗಾವಿ ಹೇಳಿದರು.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಹನುಮಂತ ನಿರಾಣಿ, ಮಾತನಾಡಿ ಸರಕಾರ ಶಿಕ್ಷಣಕ್ಕೆ ಆದ್ಯತೆ ನೀಡಬೇಕು ಶಿಕ್ಷಣಕ್ಕೆ ಒತ್ತ ನೀಡಿದಾಗ ಮಾತ್ರ ಸಮಾಜದ ಅಭಿವೃದ್ಧಿ ಎಂದು ಹೇಳಿದರು.
ಈ ಸಂದರ್ಭದಲ್ಲಿ ಬೆಳಗಾವಿ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಪಟ್ಟಿಯನ್ನು ಗಣ್ಯರು ಬಿಡುಗಡೆಗೊಳಿಸಿದರು.
ಜಿಲ್ಲೆಯ ಪದವಿ ಪೂರ್ವ ಶಿಕ್ಷಣ ಕ್ಷೇತ್ರದ ಸಮಸ್ಯೆಗಳು, ಚರ್ಚೆ ಉಪನ್ಯಾಸಕರ ಹಿತಾಸಕ್ತಿ ಹಾಗೂ ಶೈಕ್ಷಣಿಕ ಗುಣಮಟ್ಟ ಸುಧಾರಣೆ ಕುರಿತು ಸಮ್ಮೇಳನದಲ್ಲಿ ಚರ್ಚಿಸಲಾಯಿತು. ಕರ್ನಾಟಕ ರಾಜ್ಯ ಪದವಿಪೂರ್ವ ಮಹಾ ವಿದ್ಯಾಲಯಗಳ ನೌಕರ ಸಂಘದ ಜಿಲ್ಲಾ ಘಟಕದ ಉದ್ಘಾಟನೆ ಸಮಾರಂಭ ಹಾಗೂ ಶೈಕ್ಷಣಿಕ ಸಮ್ಮೇಳನ ನೌಕರ ಸಮಸ್ಯೆಗಳು ಕುರಿತು ಚರ್ಚೆ ಮಾಡಲಾಯಿತು.
ನೌಕರ ಸಂಘದ ಅಧ್ಯಕ್ಷ ಭಾಸ್ಕರ್ ಹೆಗಡೆ ಅಧ್ಯಕ್ಷತೆ ವಹಿಸಿದ್ದರು ಪದವಿಪೂರ್ವ ಕಾಲೇಜು ನಿರ್ದೇಶಕ ಎಂ.ಎಂ ಕಾಂಬ್ಳೆ ಜಿಲ್ಲಾ ಅಧ್ಯಕ್ಷ ಟಿ.ಎಸ್ ಗಿರಿಯಪ್ಪನವರ್ ಗೌರವಾಧ್ಯಕ್ಷ ಎಂ.ಕೆ.ಭಜಂತ್ರಿ ಪ್ರಭು ಶಿವನಾಯ್ಕರ್ ಉಪಾಧ್ಯಕ್ಷ ವೈ.ಎಂ.ಪಾಟೀಲ್ ನಾಗರಾಜ್ ಮರೇಯಣ್ಣವರ್, ನಟರಾಜ್ ಪಾಟೀಲ್ ಸಂಗ್ಮೇಶ್ ಕೆಳಗೇರಿ ಉಪಸ್ಥಿತರಿದ್ದರು.




