ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ಯೂಥ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ವಿವಾದಕ್ಕೆ ಸಂಬಂಧಿಸಿದಂತೆ ಕೊನೆಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಣದ ಕೈ ಮೇಲಾಗಿದ್ದು, ಜನವರಿ ಬಳಿಕ ಮೊಹಮ್ಮದ್ ನಲಪಾಡ್ ಗೆ ಅಧಿಕಾರ ಹಸ್ತಾಂತರಕ್ಕೆ ನಿರ್ಧರಿಸಲಾಗಿದೆ.
ರಾಜ್ಯ ಯೂಥ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ರಕ್ಷಾ ರಾಮಯ್ಯ ಕೆಳಗಿಳಿಸುವ ವಿಚಾರವಾಗಿ ವಿವಾದ ತಾರಕಕ್ಕೇರಿತ್ತು, ಯೂಥ್ ಕಾಂಗ್ರೆಸ್ ಅಧ್ಯಕ್ಷ ಪಟ್ಟದ ವಿಚಾರವಾಗಿ ಸಿದ್ದರಾಮಯ್ಯ ಹಾಗೂ ಡಿಕೆಶಿ ಬಣಗಳ ನಡುವೆ ಕಿತ್ತಾಟ ಆರಂಭವಾಗಿತ್ತು. ಇದೀಗ ವಿವಾದಕ್ಕೆ ತೆರೆ ಎಳೆಯಲಾಗಿದ್ದು, 2022ರ ಜನವರಿ 31ರ ವರೆಗೂ ರಕ್ಷಾ ರಾಮಯ್ಯ ಯೂಥ್ ಕಾಂಗ್ರೆಸ್ ಅಧ್ಯಕ್ಷರಾಗಿ ಮುಂದುವರೆಯಲಿದ್ದಾರೆ. ಜನವರಿ 31ರ ಬಳಿಕ ಮೊಹಮ್ಮದ್ ನಲಪಾಡ್ ನೇಮಕ ಮಾಡಲಾಗುವುದು ಎಂದು ಕೇಂದ್ರ ಯೂಥ್ ಕಾಂಗ್ರೆಸ್ ತಿಳಿಸಿದೆ.
ಈ ಕುರಿತು ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ ಶ್ರೀನಿವಾಸ್ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ.
ನಾನೂ ಸಿಎಂ ಸ್ಥಾನದ ಆಕಾಂಕ್ಷಿ ಎಂದ ಉಮೇಶ್ ಕತ್ತಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ