ರಾಜ್ಯದ ಗಡಿ ವಿಚಾರ- ಸರ್ಕಾರದ ನಿಲುವು ಸ್ಪಷ್ಟ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

 ಪ್ರಗತಿವಾಹಿನಿ ಸುದ್ದಿ, ಬೆಂಗಳೂರು  :

ರಾಜ್ಯದ ಗಡಿ ಬಗ್ಗೆ ಸರ್ಕಾರದ ನಿಲುವು ಬಹಳ ಸ್ಪಷ್ಟವಾಗಿದೆ. ರಾಜ್ಯದ ಗಡಿ ಪ್ರದೇಶದ ಒಂದಿಂಚೂ ಜಾಗವನ್ನು ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಸಮಾಜಕಲ್ಯಾಣ ಇಲಾಖೆಯ ಕಲ್ಯಾಣ ಮಿತ್ರ ಸಹಾಯವಾಣಿ ಹಾಗೂ ಇಲಾಖೆಯ ಅಧಿಕಾರಿಗಳಿಗೆ ವೃತ್ತಿ ಸಾಮರ್ಥ್ಯ ಅಭಿವೃದ್ಧಿ ಕಾರ್ಯಾಗಾರವನ್ನು ಉದ್ಘಾಟಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಮಹಾರಾಷ್ಟ್ರದಲ್ಲಿನ ರಾಜಕಾರಣಿಗಳು ಇಕ್ಕಟ್ಟಿನಲ್ಲಿ ಸಿಲುಕಿದ್ದಾರೆ. ಅದಕ್ಕಾಗಿ ರಾಜ್ಯದ ಗಡಿ ಭಾಷೆಗಳ ಬಗ್ಗೆ ಕೆದಕುತ್ತಿದ್ದಾರೆ. ಮಹಾರಾಷ್ಟ್ರದಲ್ಲಿ ಹಲವಾರು ಕನ್ನಡ ಭಾಷೆ ಮಾತನಾಡುವ ಪ್ರದೇಶಗಳಿವೆ . ಈ ಬಗ್ಗೆಯೂ ಕ್ರಮ ತೆಗೆದುಕೊಳ್ಳುವ ಚಿಂತನೆ ಸರ್ಕಾರ ಮಾಡುತ್ತಿದೆ. ಅವರ ರಾಜಕೀಯ ಉಳಿವಿಗಾಗಿ ರಾಜ್ಯದ ಗಡಿ ಭಾಷೆ ವಿಚಾರಗಳನ್ನು ಎತ್ತುವುದು ಸಣ್ಣತನ. ಈ ರೀತಿಯನ್ನು ಮಹಾರಾಷ್ಟ್ರದ ಎಲ್ಲಾ ರಾಜಕಾರಣಿಗಳು ಕೈಬಿಡುವಂತೆ ಮುಖ್ಯಮಂತ್ರಿಗಳು ಆಗ್ರಹಿಸಿದರು.

Home add -Advt

ಸಭಾಪತಿ ಬಸವರಾಜ್ ಹೊರಟ್ಟಿ ಬಿಜೆಪಿ ಸೇರ್ಪಡೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button