ಆನ್‌ಲೈನ್‌ ಮದ್ಯ ಮಾರಾಟದ ಸಲಹೆ ನೀಡಿದ ಸುಪ್ರೀಂ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಲಾಕ್ ಡೌನ್ ಸಡಿಲಿಕೆಯಾದ ಬೆನ್ನಲ್ಲೇ ಮದ್ಯ ಮಾರಾಟಕ್ಕೆ ಅನುಮತಿ ನೀಡಲಾಗಿದ್ದು, ಈ ನಡುವೆ ಕೊರೊನಾ ಸೋಂಕಿತರ ಸಂಖ್ಯೆಯೂ ದೇಶದಲ್ಲಿ ಹೆಚ್ಚುತ್ತಿದೆ. ಈ ಹಿನ್ನಲೆಯಲ್ಲಿ ಸಾಮಾಜಿಕ ಅಂತರದ ಹಿತದೃಷ್ಟಿಯಿಂದ ಎಲ್ಲಾ ರಾಜ್ಯಗಳು ಮಳಿಗೆಗಳಲ್ಲಿ ಮದ್ಯ ಮಾರಾಟ ಮಾಡುವ ಬದಲು ಆನ್‌ಲೈನ್‌ ಮದ್ಯ ಮಾರಾಟ ಸೂಕ್ತ ಎಂದು ಸುಪ್ರೀಂ ಕೋರ್ಟ್‌ ಅಭಿಪ್ರಾಯಪಟ್ಟಿದೆ.

ಕೊರೋನಾ ಕಾರಣಕ್ಕೆ ಭಾರತದಲ್ಲಿ ಮೂರು ಹಂತದಲ್ಲಿ ಲಾಕ್‌ಡೌನ್ ಘೋಷಿಸಲಾಗಿತ್ತು.ಇದೇ ಕಾರಣಕ್ಕೆ ಬರೋಬ್ಬರಿ 45 ದಿನಗಳ ಕಾಲ ದೇಶದಾದ್ಯಂತ ಮದ್ಯ ಮಾರಾಟವನ್ನು ಸ್ಥಗಿತಗೊಳಿಸಲಾಗಿತ್ತು. ಆದರೆ, ಇದೀಗ ಲಾಕ್‌ಡೌನ್ ಸಡಿಲಿಸಿರುವ ಕಾರಣ ಕಳೆದ ಸೋಮವಾರದಿಂದ ದೇಶದೆಲ್ಲೆಡೆ ಮದ್ಯ ಮಾರಾಟ ಯಥೇಚ್ಛವಾಗಿ ಸಾಗುತ್ತಿದೆ. ಈ ಹಿನ್ನಲೆಯಲ್ಲಿ ಮದ್ಯದ ಅಂಗಡಿಗಳಲ್ಲಿ ಜನದಟ್ಟಣೆ ಹೆಚ್ಚಿದೆ, ಇದರಿಂದ ಕೊರೊನಾ ವ್ಯಾಪಕವಾಗಿ ಹರಡಲಿದೆ ಎಂದು ಸುಪ್ರೀಂ ಕೋರ್ಟ್‌‌ನಲ್ಲಿ ಪಿಐಎಲ್‌ ದಾಖಲಿಸಲಾಗಿತ್ತು.

ಇಂದು ಈ ಅರ್ಜಿಯ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್‌, ಮಳಿಗೆಗಳಲ್ಲಿ ಮದ್ಯ ಮಾರಾಟ ಮಾಡುವುದರಿಂದ ಜನ ಸಂದಣಿಗೆ ಹೆಚ್ಚಾಗುತ್ತದೆ. ಈ ಮೂಲಕವೂ ಕೊರೋನಾ ವೈರಸ್‌ ಹರಡುವ ಸಾಧ್ಯತೆ ಇದೆ. ಹೀಗಾಗಿ ಸಾಮಾಜಿಕ ಅಂತರದ ದೃಷ್ಟಿಯಿಂದ ಹೋಂ ಡಿಲೆವರಿ ಸೂಕ್ತ. ಆನ್‌ಲೈನ್ ಮೂಲಕ ಮನೆಗಳಿಗೆ ಮದ್ಯವನ್ನು ವಿತರಿಸಬೇಕು ಎಂದು ರಾಜ್ಯ ಸರ್ಕಾರಗಳಿಗೆ ತಿಳಿಸಿದೆ.

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button