Latest

ಭೀಕರ ರಸ್ತೆ ಅಪಘಾತ; ಇಬ್ಬರು ಸಜೀವ ದಹನ

ಪ್ರಗತಿವಾಹಿನಿ ಸುದ್ದಿ; ಹಾಸನ; ಕೆಮಿಕಲ್ಸ್ ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸಜೀವ ದಹನಗೊಂಡಿದ್ದು, ಮೂವರು ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ.

ಹಾಸನ ಜಿಲ್ಲೆ ಅರಕಲಗೋಡು ತಾಲೂಕಿನ ಬಸವನಹಳ್ಳಿ ಬಳಿ ಕೆಮಿಕಲ್ ಲಾರಿ ಪಲ್ಟಿಯಾಗಿದೆ. ಪರಿಣಾಮ ಲಾರಿಯಲ್ಲಿದ್ದ ಆಸಿಡ್ ಸೇರಿದಂತೆ ವಿವಿಧ ರಾಸಾಯನಿಕಗಳು ಚೆಲ್ಲಿ ಬೆಂಕಿ ಹೊತ್ತಿಕೊಂಡಿದೆ. ಲಾರಿಯಲ್ಲಿದ್ದ ಮೂವರ ಪೈಕಿ ಇಬ್ಬರು ಸಜೀವ ದಹನಗೊಂಡಿದ್ದಾರೆ. ಮತ್ತೋರ್ವನಿಗೆ ಗಂಭೀರಗಾಯಗಳಾಗಿದ್ದು, ಆಸ್ಪತ್ರೆಗೆ ಸಾಗಿಸಲಾಗಿದೆ.

Home add -Advt

ಆದರೆ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿಯೇ ಆತ ಸಾವನ್ನಪ್ಪಿದ್ದಾನೆ.

Related Articles

Back to top button