Kannada NewsKarnataka NewsPolitics

*ಕೃಪಾ ಆಳ್ವಾಗೆ ಬಿಗ್ ರಿಲೀಫ್*

ಸ್ಟಿಂಗ್ ಆಪರೇಷನ್: ಕೃಪಾ ಆಳ್ವಾಗೆ ಬಿಗ್ ರಿಲೀಫ್

ಪ್ರಗತಿವಾಹಿನಿ ಸುದ್ದಿ: ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ದಿನಕ್ಕೊಂದು ಬೆಳವಣಿಗೆ ನಡೆಯುತ್ತಿದೆ. ಸ್ಟಿಂಗ್ ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬರಾದ ಕೃಪಾ ಆಳ್ವಾಗೆ ಬಿಗ್ ರಿಲೀಫ್ ಸಿಕ್ಕಿದೆ.

ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ಪ್ರಮುಖವಾಗಿ ಕೇಳಿಬಂದ ವ್ಯಕ್ತಿ ಕೃಪಾ ಆಳ್ವಾಅ. ಇದೀಗ ಅವರಿಗೆ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಸ್ಟಿಂಗ್ ಆಪರೇಷನ್ ನಲ್ಲಿ ಅವರ ಹೆಸರು ಬೆಳಕಿಗೆ ಬರುತ್ತಿದ್ದಂತೆ ಕಾಂಗ್ರೆಸ್​​​ನಿಂದ ಅಮಾನತುಗೊಂಡಿರುವ ಕೃಪಾ ಆಳ್ವಾ ಸೇರಿದಂತೆ ಮೂವರಿಗೆ ಬೆಂಗಳೂರಿನ ಕೋರ್ಟ್ ಜಾಅಮೀನು ಮಂಜೂರು ಮಾಡಿದೆ.

ಕೃಪಾ ಆಳ್ವಾ, ವಿನೋದ್ ಕುಮಾರ್ ಹಾಗೂ ಪ್ರಶಾಂತ್ ಕುಮಾರ್ ಗೆ ಬೆಂಗಳೂರಿನ 66ನೇ ಸಿಸಿಹೆಚ್ ಕೋರ್ಟ್​ ಮಧ್ಯಂತರ ಜಾಮೀನು ನೀಡಿ ಆದೇಶ ಹೊರಡಿಸಿದೆ.

ಸ್ಟಿಂಗ್ ಆಪರೇಷನ್ ಸಂಬಂಧ ಮಾಜಿ ಸಿಎಂ ಸಿದ್ದರಾಮಯ್ಯನವರು ದೂರು ನೀಡಿದ್ದು, ಈ ದೂರಿನ ಅನ್ವಯ ಸಿಸಿಬಿ ಪೊಲೀಸರು, ಕೃಪಾ ಆಳ್ವಾ, ವಿನೋದ್ ಕುಮಾರ್ ಹಾಗೂ ಪ್ರಶಾಂತ್ ಕುಮಾರ್ ಸೇರಿದಂತೆ ಹಲವರನ್ನು ವಿಚಾರಣೆಗೊಳಪಡಿಸಿ ಕೆಲ ಮಾಹಿತಿಯನ್ನು ಕಲೆ ಹಾಕಿದ್ದಾರೆ. ಬಂಧನ ಭೀತಿಯಲ್ಲಿದ್ದ ಮೂವರು ನಿರೀಕ್ಷಣಾ ಜಾಮೀನಿಗಾಗಿ ಕೋರ್ಟ್ ಮೊರೆ ಹೋಗಿದ್ದರು.

ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಮೂವರಿಗೂ ಜಾಮೀನು ಮಂಜೂರು ಮಾಡಿದೆ. ಪೊಲೀಸರ ತನಿಖೆಗೆ ಸಹಕರಿಸಬೇಕು ಹಾಗೇ ಸಾಕ್ಷಿಗಳಿಗೆ ಬೆದರಿಕೆ ಹಾಕದಂತೆ ಷರತ್ತು ವಿಧಿಸಿ ಜಾಮೀನು ಮಂಜೂರು ಮಾಡಿದೆ.

ಇನ್ನು ಪ್ರಕರಣದಲ್ಲಿ ಅಕ್ಟೋಬರ್ 23ರಂದು ಖಾಸಗಿ ಸುದ್ದಿವಾಹಿನಿ ವ್ಯವಸ್ಥಾಪಕ ನಿರ್ದೇಶಕ ರಾಕೇಶ್ ಶೆಟ್ಟಿ ಅವರಿಗೆ ಬೆಂಗಳೂರಿನ ನ್ಯಾಯಾಲಯ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಿತ್ತು.

Related Articles

Back to top button