Kannada NewsKarnataka NewsLatest

*ಸ್ಟಿಂಗ್ ಆಪರೇಷನ್*: *ವಿಚಾರಣೆಗೆ ಹಾಜರಾದ ಪ್ರಜ್ವಲ್ ಪ್ರಸಾದ್*

ಪ್ರಗತಿವಾಹಿನಿ ಸುದ್ದಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ಪಿಆರ್‌ಒ ಪ್ರಜ್ವಲ್ ಪ್ರಸಾದ್ ಇಂದು ಸಿಸಿಬಿ ಸೈಬರ್ ಕ್ರೈಮ್ ಪೊಲೀಸ್ ಠಾಣೆಗೆ ವಿಚಾರಣೆಗಾಗಿ ಹಾಜರಾಗಿದ್ದಾರೆ.

ದೆಹಲಿಯ ಕುಮಾರಸ್ವಾಮಿ ಅವರ ನಿವಾಸದಲ್ಲಿ ಪ್ರಕರಣದ ಪ್ರಮುಖ ಆರೋಪಿ ರಿತೇಶ್ ಪಾಂಡೆಗೆ ಮೊಬೈಲ್ ಹಸ್ತಾಂತರಿಸಿದ ಆರೋಪ ಪ್ರಜ್ವಲ್ ವಿರುದ್ಧ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಸೈಬರ್ ಕ್ರೈಮ್ ಪೊಲೀಸರು ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿಗೊಳಿಸಿದ್ದರು.

ಇತ್ತೀಚೆಗೆ ಬೆಂಗಳೂರು ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಅವರು ಪ್ರಜ್ವಲ್ ಪ್ರಸಾದ್ ನಾಪತ್ತೆಯಾಗಿದ್ದಾರೆ ಎಂದು ತಿಳಿಸಿದ್ದರು. ಆದರೆ, ಪ್ರಜ್ವಲ್ ನ್ಯಾಯಾಲಯದಿಂದ ಮಧ್ಯಂತರ ನಿರೀಕ್ಷಣಾ ಜಾಮೀನು ಪಡೆದುಕೊಂಡಿದ್ದು, ಇದೀಗ ಪೊಲೀಸರ ನೋಟಿಸ್ ಬೆನ್ನಲ್ಲೇ ವಿಚಾರಣೆಗೆ ಸಿಸಿಬಿ ಮುಂದೆ ಹಾಜರಾಗಿದ್ದಾರೆ.

Related Articles

Back to top button