
ಪ್ರಗತಿವಾಹಿನಿ ಸುದ್ದಿ: ಭಾನುವಾರ ರಾತ್ರಿ ಗಣಪತಿ ವಿಸರ್ಜನೆ ಮೆರವಣಿಗೆ ನಡೆಸುತ್ತಿರುವಾಗ ಕಲ್ಲು ತೂರಾಟ ನಡೆದಿದದ್ದು, ಈ ಘಟನೆಯಲ್ಲಿ ನಾಲ್ವರು ಹೋಂಗಾರ್ಡ್ಗಳು ಸೇರಿ 8 ಜನರು ಗಾಯವಾಗಿರುವ ಘಟನೆ ಮಂಡ್ಯದ ಮದ್ದೂರಿನಲ್ಲಿ ನಡೆದಿದೆ.
ಚನ್ನೇಗೌಡ ಬಡಾವಣೆ ನಿವಾಸಿಗಳು ಗಣಪತಿ ವಿಸರ್ಜಾನ ರ್ಯಾಲಿ ನಡೆಸುತ್ತಿದ್ದ ವೇಳೆ ದಿಢೀರ್ ಲೈಟ್ ಆಫ್ ಮಾಡಿ ಮಸೀದಿಯಿಂದ ಕಲ್ಲು ತೂರಾಟ ನಡೆಸಿದ್ದಾರೆ. ಅಲ್ಲದೇ ದೊಣ್ಣೆಗಳನ್ನು ಕೂಡ ಎಸೆದಿದ್ದಾರೆ ಎಂದು ಸ್ಥಳದಲ್ಲಿದ್ದವರು ದೂರಿದ್ದಾರೆ.
ಮಸೀದಿ ಬಳಿ ಬಂದಾಗ ಯಾವುದೇ ಘೋಷಣೆ ಕೂಗಬಾರದು. ಮೈಕ್ ಹಾಕಬಾರದು ಎಂದು ಮೊದಲೇ ಎಚ್ಚರಿಕೆ ನೀಡಲಾಗಿತ್ತು. ಅದರಂತೆ ಮೈಕ್ ಆಫ್ ಮಾಡಿ ಮೆರವಣಿಗೆ ಮಾಡಲಾಗುತ್ತಿತ್ತು. ಆದರೂ ಕಲ್ಲು ತೂರಾಟ ನಡೆಸಲಾಗಿದೆ ಎಂದು ಹಿಂದೂಗಳು ಆರೋಪಿಸಿದ್ದಾರೆ.
ಸ್ಥಳಕ್ಕೆ ಮಂಡ್ಯ ಎಸ್‌ಪಿ ಬಾಲದಂಡಿ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ. ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ ಪ್ರಕರಣ ಸಂಬಂಧ 20ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸದ್ಯ ಮದ್ದೂರಿನಲ್ಲಿ ಪರಿಸ್ಥಿತಿ ಬೂದಿಮುಚ್ಚಿದ ಕೆಂಡದಂತಿದೆ. ನಿಷೇಧಾಜ್ಞೆ ಜಾರಿಯಲ್ಲಿದೆ.