Election NewsKannada NewsKarnataka NewsPolitics
ಪ್ರದೀಪ್ ಈಶ್ವರ್ ಮನೆ ಮೇಲೆ ಕಲ್ಲು ತೂರಾಟ

ಪ್ರಗತಿವಾಹಿನಿ ಸುದ್ದಿ: ಚಿಕ್ಕಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಮನೆಯ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದು, ಮನೆಯ ಕಿಟಗಿ ಗಾಜುಗಳು ಪುಡಿಪುಡಿಯಾಗಿದೆ.
ಚಿಕ್ಕಬಳ್ಳಾಪುರ ನಗರದ ಕಂದವಾರದಲ್ಲಿರುವ ಶಾಸಕ ಪ್ರದೀಪ್ ಈಶ್ವರ್ ಮನೆ ಮೇಲೆ ಕಿಡಿಗೆಡಿಗಳು ಕಲ್ಲು ತೂರಾಟ ನಡೆಸಿದ್ದರಿಂದ ಮನೆಯ ಕಿಟಕಿ, ಗಾಜುಗಳು ಪುಡಿಪುಡಿಯಾಗಿದೆ ಎನ್ನಲಾಗಿದೆ. ಚುನಾವಣೆಯಲ್ಲಿ ಡಾ. ಸುಧಾಕರ್‌ಗೆ ಗೆಲುವು ಸಿಕ್ಕ ಹಿನ್ನೆಲೆಯಲ್ಲಿ ಇದೀಗ ಕಲ್ಲು ತೂರಾಟ ನಡೆಸಿರುವ ಶಂಕೆ ವ್ಯಕ್ತವಾಗುತ್ತಿದೆ. ತಕ್ಷಣ ಚಿಕ್ಕಬಳ್ಳಾಪುರ ನಗರ ಪೊಲೀಸರು ಶಾಸಕರ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಾಸಕರ ಮನೆಯ ಸುತ್ತಮುತ್ತ ಅಳವಡಿಸಿರುವ ಸಿಸಿ ಕ್ಯಾಮೆರಾಗಳನ್ನು ಪರಿಶೀಲಿಸಿ, ಕಿಡಿಗೇಡಿಗಳ ಬಂಧನಕ್ಕೆ ಬಲೆಬೀಸಿದ್ದಾರೆ.




