Kannada NewsKarnataka NewsLatest

ಕೊಳವೆ ಬಾವಿಗೆ ಬಿದ್ದು ರೈತ ಸಾವು: ಆಕಸ್ಮಿಕವೋ? ಆತ್ಮಹತ್ಯೆಯೋ?

ಪ್ರಗತಿವಾಹಿನಿ ಸುದ್ದಿ, ಚಿಕ್ಕೋಡಿ –   ತನ್ನ ಜಮೀನನಲ್ಲಿ ಕೊರಸಿದ ಕೊಳವೆ ಬಾವಿಯಲ್ಲಿ ರೈತನೋರ್ವ ಸಿಲುಕಿಕೊಂಡು ಸಾವನ್ನಪ್ಪಿದ್ದಾನೆ.
ಸುಲ್ತಾನಪುರ ಗ್ರಾಮದ ಲಕ್ಕಪ್ಪ ಸಂಗಪ್ಪ ದೊಡಮನಿ (28) ಕೊಳವೆ ಬಾವಿಯಲ್ಲಿ ಸಿಲುಕಿದ ರೈತ.
 ರಾಯಬಾಗ ತಾಲೂಕಿನ ಸುಲ್ತಾನಪುರ ಗ್ರಾಮದಲ್ಲಿ ಘಟನೆ ನಡೆದಿದ್ದು, ಆತ್ನಹತ್ಯೆಯೋ ಅಥವಾ ಕಾಲು ಜಾರಿ ಬಿದ್ದನೋ ಎಂಬುದು ಹಲವು ಅನುಮಾನಗಳಿಗೆ ಕಾರಣವಾಗಿದೆ.
೨೦ ಅಡಿ ಆಳದಲ್ಲಿ ಸಿಲುಕಿಕೊಂಡಿದ್ದು, ಬೆಳಿಗ್ಗೆ ನಡೆದ ಘಟನೆ, ಮಧ್ಯಾಹ್ನ ಘಟನೆ ಬೆಳಕಿಗೆ ಬಂದಿದೆ. ಸಂಜೆಯ ಹೊತ್ತಿಗೆ ಶವವನ್ನು ಹೊರತೆಗೆಯಲಾಗಿದೆ.
ಸ್ಥಳಕ್ಕೆ ರಾಯಬಾಗ ತಹಸೀಲ್ದಾರ, ತಾಪಂ ಇಒ, ಪೊಲಿಸ್ ಹಾಗೂ ಅಗ್ನಿಶಾಮ ಸಿಬ್ಬಂದಿ  ಭೇಟಿ ನೀಡಿ, ಕಾರ್ಯಾಚರಣೆ ನಡೆಸಿ ಶವ ಮೆಲೆತ್ತಿದ್ದಾರೆ.
ಹಾರೂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Home add -Advt

Related Articles

Back to top button