
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಕೊರೋನಾ ವೈರಸ್ ತೀವ್ರವಾಗಿ ಹರಡುತ್ತಿರುವ ಮಧ್ಯೆಯೂ ರಾಜ್ಯದ ವಿವಿಧೆಡೆ ಮುಸ್ಲಿಂ ಸಮುದಾಯದ ಜನರು ಶುಕ್ರವಾರದ ನಮಾಜ್ ಮಾಡಲು ಪ್ರಯತ್ನಿಸಿದ್ದಾರೆ.
ದೇಶಾದ್ಯಂತ ಲಾಕ್ ಡೌನ್ ಘೋಷಿಸಿದ್ದರೂ ಅದನ್ನು ದಿಕ್ಕರಿಸಿ ದೊಡ್ಡ ದೊಡ್ಡ ಗುಂಪುಗಳಲ್ಲಿ ಪ್ರಾರ್ಥನೆ ಸಲ್ಲಿಸಲು ಆಗಮಿಸುತ್ತಿದ್ದರು. ಹುಬ್ಬಳ್ಳಿಯಲ್ಲಿ ನಮಾಜ್ ಮಾಡದಂತೆ ತಡೆಯಲು ಬಂದ ಪೊಲೀಸರ ಮೇಲೆ ಕಲ್ಲು, ಚಪ್ಪಲಿ ತೂರಲಾಗಿದೆ. ಘಟನೆಯಲ್ಲಿ ನಾಲ್ವರು ಪೊಲೀಸರಿಗೆ ಗಾಯಗಳಾಗಿವೆ. ಅವರಿಗೆ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
ಬಳ್ಳಾರಿಯಲ್ಲಿ 30ಕ್ಕೂ ಹೆಚ್ಚು ಜನರನ್ನು ಪೊಲೀಸರು ತಡೆಯಲೆತ್ನಿಸಿದಾಗ ಪ್ರತಿಭಟನೆ ನಡೆಸಿದ್ದಾರೆ. ಅವರಲ್ಲಿ ಕೆಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಶಿವಮೊಗ್ಗದಲ್ಲಿ 70ಕ್ಕೂ ಹೆಚ್ಚು ಜನರು ಪ್ರಾರ್ಥನೆ ಸಲ್ಲಿಸಿದ್ದಾರೆ. ರಾಜ್ಯದ ಹಲವೆಡೆ ಲಾಕ್ ಡೌನ್ ಮಧ್ಯೆಯೂ ಪ್ರಾರ್ಥನೆ ಸಲ್ಲಿಸಲಾಗಿದೆ. ಪೊಲೀಸರ ಯಾವ ಮನವಿಗೂ ಬಗ್ಗದೆ ಪ್ರತಿಭಟನೆ ನಡೆಸಿದ್ದಲ್ಲದೆ, ಕಲ್ಲು ತೂರಾಟದಂತಹ ಕೃತ್ಯವನ್ನೂ ನಡೆಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ