
ಪ್ರಗತಿವಾಹಿನಿ ಸುದ್ದಿ : ಮಂಡ್ಯದ ಮದ್ದೂರಿನಲ್ಲಿ ಗಣೇಶ ಮೆರವಣಿಗೆ ವೇಳೆ ಕಲ್ಲುತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪರಮೇಶ್ವರ್ ಮಾತನಾಡಿದ್ದಾರೆ. ‘ಗಲಾಟೆ ಮಾಡಿದವರನ್ನು ಬಂಧಿಸಲಾಗಿದೆ. ರಾಜ್ಯದ ಕೆಲವು ಕಡೆ ಗಣೇಶ ವಿಸರ್ಜನೆ ವೇಳೆ ಕೆಲವು ಸಣ್ಣಪುಟ್ಟ ಘಟನೆಗಳಾಗಿವೆ. ಮದ್ದೂರಿನಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ. ಪರಿಸ್ಥಿತಿ ನಿಯಂತ್ರಣದಲ್ಲಿದೆ. ಗಲಾಟೆ ಮಾಡಿದವರ ವಿರುದ್ಧ ಸೂಕ್ತ ಕ್ರಮ ಕೈಗೊಂಡಿದ್ದೇವೆ. ಸೂಕ್ಷ್ಮ ಪ್ರದೇಶಗಳಿಗೆ ಹಿರಿಯ ಅಧಿಕಾರಿಗಳು ಭೇಟಿ ಕೊಟ್ಟಿದ್ದಾರೆ ಎಲ್ಲವೂ ನಿಯಂತ್ರಣದಲ್ಲಿದೆ ಎಂದು ತಿಳಿಸಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಅವರು,ಕಲ್ಲು ತೂರಾಟ ಪೂರ್ವ ನಿಯೋಜಿತ ಕೃತ್ಯ ಎನ್ನುವ ಮಾಹಿತಿ ಇದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸಿ ಕ್ರಮಕೈಗೊಳ್ಳುತ್ತಾರೆ ಎಂದು ಸ್ಪಷ್ಟಪಡಿಸಿದರು.
ನಿನ್ನೆ ಮದ್ದೂರಿನಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ ಆಗಿದೆ. ಪ್ರಕರಣ ಸಂಬಂಧ 20ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ. ಹಿಂದೂ ಸಂಘಟನೆ ಕಾರ್ಯಕರ್ತರು ಮೆರವಣಿಗೆ ಮಾಡಿದ್ದಾರೆ. ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಿ ಸೂಚಿಸಲಾಗಿದ್ದು, ಪೊಲೀಸರು ಶಾಂತಿ ಕಾಪಾಡುವ ಕೆಲಸ ಮಾಡುತ್ತಾರೆ. ಒಂದು ವೇಳೆ ಪರಿಸ್ಥಿತಿ ಕೈಮೀರಿದರೆ ಪೊಲೀಸರು ಕಾನೂನು ಕ್ರಮಕೈಗೊಳ್ಳುತ್ತಾರೆ. ಕಲ್ಲು ತೂರಾಟ ಪೂರ್ವ ನಿಯೋಜಿತ ಕೃತ್ಯ ಅನ್ನೋ ಮಾಹಿತಿ ಇದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸಿ ಕ್ರಮಕೈಗೊಳ್ಳುತ್ತಾರೆ ಎಂದು ಹೇಳಿದರು
ಕಲ್ಲು ತೂರಾಟ ಪ್ರೀ ಪ್ಲ್ಯಾನ್ ಎಂದು ಸ್ಥಳೀಯರು ಆರೋಪಿಸಿದ್ದು, ಇದೀಗ ಗೃಹ ಸಚಿವರು ಸಹ ಇದು ಪೂರ್ವ ನಿಯೋಜಿತ ಕೃತ್ಯ ಎಂದು ಒಪ್ಪಿಕೊಂಡಿದ್ದಾರೆ.
ನಿನ್ನೆ ರಾತ್ರಿ ಮದ್ದೂರಲ್ಲಿ ಗಣೇಶ ಮೂರ್ತಿ ಮೆರವಣಿಗೆ ಸಮಯದಲ್ಲಿ ಕಲ್ಲು ತೂರಾಟ ಮಾಡಿ ಕಿಡಿಗೇಡಿಗಳ ದುಷ್ಕೃತ್ಯದಿಂದ ಇಡೀ ಪಟ್ಟಣವೇ ಉದ್ವಿಗ್ನಗೊಂಡಿದ್ದು, ಇದೀಗ ಈ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಫ್ರೀ ಪ್ಲಾನ್ ಮಾಡಿ ಕಲ್ಲು ತೂರಾಟ ಮಾಡಿದ್ದಾರೆ ಎಂದು ಸಾರ್ವಜನಿಕರು ಆರೋಪಿದ್ದಾರೆ.
ಈ ಸಂಬಂಧ ಆಡಳಿತರೂಢ ಕಾಂಗ್ರೆಸ್ ಹಾಗೂ ವಿಪಕ್ಷ ಬಿಜೆಪಿ, ಜೆಡಿಎಸ್ ನಾಯರ ನಡುವೆ ಆರೋಪ ಪ್ರತ್ಯಾರೋಪ ಜೋರಾಗಿದೆ.