Belagavi NewsBelgaum NewsKannada NewsKarnataka News

*ಬೆಳಗಾವಿ ಎಂದೆಂದೂ ಕರ್ನಾಟಕದ ಅವಿಭಾಜ್ಯ ಅಂಗ: ಪಾಲಿಕೆಯಲ್ಲಿ ನಿರ್ಣಯ ಕೈಗೊಳ್ಳುವಂತೆ ಕರವೇ ಒತ್ತಾಯ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂದು ಪಾಲಿಕೆಯಲ್ಲಿ ನಿರ್ಣಯ ಕೈಗೊಳ್ಳುವಂತೆ ಕರವೇ ಶಿವರಾಮೇಗೌಡ ಬಣದ ಜಿಲ್ಲಾಧ್ಯಕ್ಷ ವಾಜೀದ್ ಹಿರೇಕೊಡಿ ನೇತೃತ್ವದಲ್ಲಿ ನಡೆದ ಪ್ರತಿಭಟನೆ ನಡೆಸಲಾಗಿದೆ.

ಗುರುವಾರ ನಗರದ ಚನ್ನಮ್ಮ ವೃತ್ತದಲ್ಲಿ ಹಾಗೂ ಬೆಳಗಾವಿ ಮಹಾನಗರ ಪಾಲಿಕೆ ಮುಂದೆ ಪ್ರತಿಭಟಿಸಿ ಮನವಿ ಸಲ್ಲಿಸಲಾಯಿತು. 

Home add -Advt

ಮಹಾರಾಷ್ಟ್ರ ಪರವಾಗಿ ನಿಲುವು ಹೊಂದಿರುವ ಮರಾಠಿ ಪತ್ರಕರ್ತರನ್ನ ಗಡಿಪಾರು ಮಾಡಬೇಕು. ರಾಜ್ಯದ ಜಾಹೀರಾತು ಪಡೆದು ಮಹಾರಾಷ್ಟ್ರ ಸರ್ಕಾರಕ್ಕೆ ಸಪೋರ್ಟ್ ಮಾಡೋ ತರುಣ ಭಾರತ ಮರಾಠಿ ಪತ್ರಿಕೆಯನ್ನ ಬೆಳಗಾವಿ ಜಿಲ್ಲೆಯಿಂದ ಹೊರಹಾಕಬೇಕು. ಯಥಾವತ್ಥಾಗಿ ಮಹಾಜನ್ ವರದಿಯನ್ನು ಅನುಷ್ಠಾನ ಮಾಡಬೇಕು. 

ಈ ಹಿಂದೆ ಬೆಳಗಾವಿ ಪಾಲಿಕೆಯಲ್ಲಿ ಮಹಾರಾಷ್ಟ್ರದ ಅವಿಭಾಜ್ಯ ಅಂಗ ಎಂದು ನಿರ್ಣಯ ಕೈಗೊಳ್ಳಲಾಗಿದೆ. ಇದನ್ನು ಮಹಾರಾಷ್ಟ್ರ ಸುಪ್ರೀಂ ಕೋರ್ಟ್ ನಲ್ಲಿ ಪೂರಕ ದಾಖಲೆಗಳಾಗಿ ಬಳಸಿಕೊಳ್ಳುತ್ತಿದೆ. ಬೆಳಗಾವಿ ಪಾಲಿಕೆಯಲ್ಲಿ ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂದು ಅಂಗೀಕಾರ ಮಾಡಬೇಕೆಂದು ಬೇಡಿಕೆ ಇಟ್ಟರು.

https://pragativahini.com/congress-leaderdead-body-foundchitradurga-ದನಗಳದ-ನಪತತಯಗದದ-ಕಗರಸ

Related Articles

Back to top button