Latest

ಬಾಗಲಕೋಟೆ: ಮಹಿಳೆಯ ಮೇಲೆ ಗುಂಡಿನ ದಾಳಿ

ಪ್ರಗತಿವಾಹಿನಿ ಸುದ್ದಿ; ಬಾಗಲಕೋಟೆ: ಮಹಿಳೆಯ ಮೇಲೆ ದುಷ್ಕರ್ಮಿಗಳು ಮನಬಂದಂತೆ ಗುಂಡಿನ ದಾಳಿ ನಡೆಸಿ ಪರಾರಿಯಾಗಿರುವ ಘೋರ ಘಟನೆ ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡದ ನುಗ್ಲಿ ಓಣಿಯಲ್ಲಿ ನಡೆದಿದೆ.

ದ್ಯಾಮವ್ವ ಕಕ್ಕೇರಿ ಎಂಬ ಮಹಿಳೆ ಮೇಲೆ ಅಪರಿಚಿತರು ಗುಂಡಿನ ದಾಳಿ ನಡೆಸಿದ್ದಾರೆ. ಹಾಡ ಹಗಲೇ ನಡೆದ ಈ ಘಟನೆಗೆ ಇಡೀ ಜಿಲ್ಲೆಯೇ ಬೆಚ್ಚಿ ಬಿದ್ದಿದೆ.

Home add -Advt

ಕಾರಿನಲ್ಲಿ ಬಂದ ದುಷ್ಕರ್ಮಿಗಳ ಗುಂಪು ದ್ಯಾಮವ್ವ ಎಂಬ ಮಹಿಳೆ ಮೇಲೆ ಏಕಾಏಕಿ ಫೈರಿಂಗ್ ನಡೆಸಿ ಪರಾರಿಯಾಗಿದ್ದಾರೆ. ಗುಂಡೇಟಿಗೆ ರಕ್ತದ ಮಡುವಲ್ಲಿ ಬಿದ್ದ ಮಹಿಳೆಯನ್ನು ಬಾಗಲಕೋಟೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಹಿಳೆ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಜಿಲ್ಲಾಧಿಕಾರಿಗಳಿಗೆ ಖಡಕ್ ಎಚ್ಚರಿಕೆ ಕೊಟ್ಟ ಸಿಎಂ ಬೊಮ್ಮಾಯಿ

Related Articles

Back to top button