
ಪ್ರಗತಿವಾಹಿನಿ ಸುದ್ದಿ: ಇಬ್ಬರು ವಿದ್ಯಾರ್ಥಿನಿಯರ ಮೇಲೆ ಬೀದಿನಾಯಿ ದಾಳಿ ನಡೆಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ಡಾ. ಅಂಬೇಡ್ಕರ್ ಸ್ಕೂಲ್ ಆಫ್ ಎಕಾನಾಮಿಕ್ಸ್ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯರ ಮೇಲೆ ಬೀದಿನಾಯಿಗಳು ದಾಳಿ ನಡೆಸಿವೆ.
ವಿದ್ಯರ್ಥಿನಿಯರು ಅಂಬೇಡ್ಕರ್ ಸ್ಕೂಲ್ ಆಫ್ ಎಕಾನಾಮಿಕ್ಸ್ ನಲ್ಲಿ ಮೂರನೇ ಸೆಮಿಸ್ಟರ್ ಓದುತ್ತಿದ್ದರು. ವಿದ್ಯಾರ್ಥಿನಿಯರಾದ ಸೌಜನ್ಯ, ನಿಶ್ಚಿತಾ ಎಂಬುವವರ ಮೇಲೆ ಬೀದಿನಾಯಿಗಳು ದಾಳಿ ನಡೆಸಿವೆ. ಘಟನೆಯಲಿ ಓರ್ವಳ ಸ್ಥಿತಿ ಗಂಭೀರವಾಗಿದೆ. ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ.