Karnataka News

*ಆಟವಾಡುತ್ತಿದ್ದ ಮಗುವಿನ ಮೇಲೆ ಬೀದಿನಾಯಿ ದಾಳಿ*

ಪ್ರಗತಿವಾಹಿನಿ ಸುದ್ದಿ: ಎರಡೂವರೆ ವರ್ಷದ ಮಗುವಿನ ಮೇಲೆ ಬೀದಿನಾಯಿ ದಾಳಿ ನಡೆಸಿ ಕಚ್ಚಿ ಗಾಯಗೊಳೀಸಿರುವ ಘಟನೆ ತುಮಕೂರು ಜಿಲ್ಲೆಯ ಹೆಗ್ಗೆರೆಯಲ್ಲಿ ನಡೆದಿದೆ.

Home add -Advt

ಮನೆಯ ಮುಂದೆ ಆಟವಾಡುತ್ತಿದ್ದ ಕಂದಮ್ಮನ ಮೇಲೆ ಬೀದಿನಾಯಿಗಳು ದಾಳಿ ನಡೆಸಿವೆ. ಹಲೀಜಾ ಖಾನಂ ನಾಯಿ ದಾಳಿಗೆ ಗಂಭೀರವಾಗಿ ಗಾಯಗೊಂಡಿರುವ ಮಗು. ಮಗುವಿನ ಕಣ್ಣು, ತಲೆಯ ಭಾಗಕ್ಕೆ ಬೀದಿನಾಯಿ ಕಚ್ಚಿ ಗಾಯಗೊಳಿಸಿದೆ.

ಬೀದಿನಾಯಿಗಳ ಹಾವಳಿಯಿಂದ ಕಂಗಾಲಾಗಿರುವ ಹೆಗ್ಗೆರೆ ಗ್ರಾಮಸ್ಥರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Related Articles

Back to top button