*ಬೀದಿನಾಯಿಗಳ ದಾಳಿ: 6 ವರ್ಷದ ಬಾಲಕ ಸಾವು*

ಪ್ರಗತಿವಾಹಿನಿ ಸುದ್ದಿ: ಬೀದಿನಾಯಿಗಳ ದಾಳಿಗೆ ಬಾಲಕನೊಬ್ಬ ಬಲಿಯಾಗಿರುವ ಘಟನೆ ರಾಯಚೂರು ಜಿಇಲ್ಲೆಯ ಲಿಂಗಸಗೂರಿನಲ್ಲಿ ನಡೆದಿದೆ. ನಿನ್ನೆ ಸಂಜೆ ಬಹಿರ್ದೆಸೆಗೆಂದು ಹೋಗಿದ್ದ ಬಾಲಕನ ಮೇಲೆ ಬೀದಿನಾಯಿಗಳು ದಾಳಿ ನಡೆಸಿದ್ದವು. ನಾಯಿ ದಾಳಿಯಿಂದ ಬಾಲಕ ಗಂಭೀರವಾಗಿ ಗಾಯಗೊಂಡಿದ್ದ. ಆತನನ್ನು ರಾಯಚೂರು ಖಾಸಗಿ ಆಸ್ಪತ್ರೆಗೆದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಬಾಲಕ ಇಂದು ಸಾವನ್ನಪ್ಪಿದ್ದಾನೆ. ಲಿಂಗಸಗೂರಿನಲ್ಲಿ ಬೀದಿಇ ನಾಯಿಗಳ ಹಾವಳಿ ಹೆಚ್ಚುತ್ತಿದ್ದರೂ ಈವರೆಗೂ ಸಂಬಂಧ ಪಟ್ಟ ಅಧಿಕಾರಿಗಳು ಯಾವುದೇ ಕ್ರಮಕ್ಕೆ ಮುಂದಾಗಿಲ್ಲ. ಈಗ ಬಾಲಕನೊಬ್ಬ ನಾಯಿ ದಾಳಿಗೆ ಸಾವನ್ನಪ್ಪಿದ್ದು, ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.Home … Continue reading *ಬೀದಿನಾಯಿಗಳ ದಾಳಿ: 6 ವರ್ಷದ ಬಾಲಕ ಸಾವು*