Kannada NewsKarnataka NewsLatest

*BREAKING: ಮೂರು ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಬೀದಿನಾಯಿಗಳ ದಾಳಿ ಪ್ರಕರಣ ಮುಂದುವರೆದಿದೆ. ಮೂರು ವರ್ಷದ ಬಾಲಕಿ ಮೇಲೆ ಬೀದಿನಾಯಿಗಳು ದಾಳಿ ನಡೆಸಿದ್ದು, ಬಾಲಕಿ ಸ್ಥಿತಿ ಗಂಭೀರವಾಗಿರುವ ಘಟನೆ ನಡೆದಿದೆ.

ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಮೀನಹಾಬಳ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೀನಹಾಬಳ ಗ್ರಾಮದ ಸಾನ್ವಿ ನಾಯಿ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿರುವ ಬಾಲಕಿ. ಬಾಲಕಿಯ ತುಟಿ, ಕೆನ್ನೆಗೆ ಗಂಭೀರಗಾಯಗಳಾಗಿವೆ.

ಗಾಯಾಳು ಮಗುವನ್ನು ಸೇಡಂ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸೇಡಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬೀದಿನಾಯಿಗಳ ಹಾವಳಿ ಗ್ರಾಮದಲ್ಲಿ ಹೆಚ್ಚಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಕ್ರಮ ವಹಿಸುತ್ತಿಲ್ಲ. ಮಕ್ಕಳು, ವೃದ್ಧರು, ಮಹಿಳೆಯರು ಜೀವ ಭಯದಲ್ಲಿ ಓಡಾಡುವ ಸ್ಥಿತಿ ಎದುರಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Related Articles

Back to top button