Kannada NewsKarnataka NewsLatest

*ನಾಲ್ಕು ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳು ದಾಳಿ: ಸ್ಥಿತಿ ಗಂಭೀರ*

ಪ್ರಗತಿವಾಹಿನಿ ಸುದ್ದಿ: ಮನೆಮುಂದೆ ಆಟವಾಡುತ್ತಿದ್ದ ಬಾಲಕನ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿದ ಪರಿಣಾಮ ಬಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಯಚೂರಿನ ಮಲಿಯಾಬಾದ್ ಗ್ರಾಮದಲ್ಲಿ ನಡೆದಿದೆ.

4 ವರ್ಷದ ಬಾಲಕ ವೇಣುಗೋಪಾಲ್ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿವೆ. ದಾಳಿ ವೇಳೆ ನಾಯಿಗಳು ಬಾಲಕನ ತಲೆಯ ಭಾಗವನ್ನ ಸಂಪೂರ್ಣವಾಗಿ ಕಚ್ಚಿದೆ. ಬಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಸದ್ಯ ಬಾಲಕನನ್ನು ರಾಯಚೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಬೀದಿ ನಾಯಿಗಳ ಹಾವಳಿಗೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯರಗೇರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button