Belagavi NewsBelgaum NewsKannada NewsKarnataka NewsLatest

*BREAKING: ಚಿಕ್ಕೋಡಿಯಲ್ಲಿ ಬೀದಿನಾಯಿಯ ಅಟ್ಟಹಾಸ: 2 ವರ್ಷದ ಮಗುವಿನ ಕೆನ್ನೆಗೆ ಕಚ್ಚಿದ ನಾಯಿ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಬೀದಿನಾಯಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಬೀದಿನಾಯಿ ದಾಳಿಗೆ ಬಾಗಲಕೋಟೆಯಲ್ಲಿ 10 ವರ್ಷದ ಬಾಲಕಿ ಬಲಿಯಾಗಿರುವ ಘಟನೆ ಬೆನ್ನಲ್ಲೇ ಇತ್ತ ಬೆಳಗಾವಿಯಲ್ಲಿಯೂ ಬೀದಿನಾಯಿಯೊಂದು ಮಗುವಿನ ಮೇಲೆ ದಾಳಿ ನಡೆಸಿದೆ.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ 2 ವರ್ಷದ ಮಗುವಿನ ಮೇಲೆ ಬೀದಿನಾಯಿ ದಾಳಿ ನಡೆಸಿದ್ದು, ಮಗುವಿನ ಕೆನ್ನೆಯನ್ನು ಕಚ್ಚಿ ಗಾಯಗೊಳಿಸಿದೆ. ಮಗುವನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

ಮಗುವಿನ ಬಲಭಾಗದ ಕೆನ್ನೆಗೆ ಗಂಭೀರ ಗಾಯಗಳಾಗಿವೆ. 2 ವರ್ಷದ ರುತ್ವಿಕ್ ನಾಯಿದಾಲಿಗೆ ಒಳಗಾದ ಮಗು. ಬೆಳಗಾವಿಯಲ್ಲಿ ಬೀದಿನಾಯಿಗಳ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಬೀದಿನಾಯಿಗಳ ಕಡಿವಾಣಕ್ಕೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button