Karnataka News

*ಬೀದಿನಾಯಿ ದಾಳಿಗೆ ಮಹಿಳೆ ಬಲಿ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬೀದಿನಾಯಿಗಳ ಹಾವಳಿ ಮುಂದುವರೆದಿದೆ. ಬೀದಿನಾಯಿಗಳ ದಾಳಿಯಿಂದಾಗಿ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಗದಗ ಜಿಲ್ಲೆಯ ಗಜೇಂದ್ರಗಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಹೂವು ತರಲೆಂದು ಹೋಗಿದ್ದ ಮಹಿಳೆ ಮೇಲೆ ಬೀದಿನಾಯಿಗಳು ದಾಳಿ ನಡೆಸಿದ್ದು, ಕಚ್ಚಿ ಗಾಯಗೊಳಿಸಿವೆ. ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಸಾವನ್ನಪ್ಪಿದ್ದಾರೆ.

ಪ್ರೇಮವ್ವ ಚೋಳಿನ (52) ಮೃತ ಮಹಿಳೆ. ಬೀದಿನಾಯಿ ಹಾವಳಿ ತಡೆಗಟ್ಟದ ಪುರಸಭೆ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button