Kannada NewsKarnataka NewsLatestNational

*ಬೀದಿಬದಿ ವ್ಯಾಪಾರಿಗಳಿಗೆ ಹಬ್ಬದ ಸಂದರ್ಭದಲ್ಲಿ ಬಿಗ್ ರಿಲೀಫ್: NHRC ಮಹತ್ವದ ನಿರ್ದೇಶನ*

ಪ್ರಗತಿವಾಹಿನಿ ಸುದ್ದಿ: ಬೀದಿಬದಿ ವ್ಯಾಪಾರಿಗಳಿಗೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (NHRC) ಹಬ್ಬದ ಸಂದರ್ಭಗಳಲ್ಲಿ ಬಿಗ್ ರಿಲೀಫ್ ನೀಡಿದೆ. ನವರಾತ್ರಿ, ದೀಪಾವಳಿಯಂತಹ ಹಬ್ಬದ ಸಂದರ್ಭಗಳಲ್ಲಿ ಬೀದಿಬದಿ ವ್ಯಾಪಾರಿಗಳನ್ನು ತೆರವು ಮಾಡುವಂತಿಲ್ಲ ಎಂದು ನಿರ್ದೇಶನ ನೀಡಿದೆ.

ಹಬ್ಬದ ಸಂದರ್ಭದಲ್ಲಿ ಬೀದಿಬದಿ ವ್ಯಾಪಾರ ಮಾಡಲು ಅವಕಾಶ ನೀಡಬೇಕು. ಕಿರುಕುಳ, ಸುಲಿಗೆ, ಅನಗತ್ಯ ಹಸ್ತಕ್ಷೇಪ ಮಾಡುವಂತಿಲ್ಲ. ಈ ರೀತಿ ಮಾಡಿದರೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಎಲ್ಲಾ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚನೆ ನೀಡಿದೆ.

ಒಂದು ವೇಳೆ ತೆರವು ಅನಿವಾರ್ಯವಾದರೆ ಅವರಿಗೆ ಪರ್ಯಾಯ ಸ್ಥಳ ಕಲ್ಪಿಸಿಕೊಡಬೇಕು. ಬೀದಿಬದಿ ವ್ಯಾಪಾರಿಗಳ ಸರಕುಗಳನ್ನು ಅನಿಯಮಿತವಾಗಿ ಮುಟ್ಟುಗೋಲು ಹಾಕುವಂತಿಲ್ಲ ಎಂದು ತಿಳಿಸಿದೆ. ಈ ಹಿನ್ನೆಲೆಯಲ್ಲಿ ಹಬ್ಬದ ಸಂದರ್ಭ ಸಮೀಪಿಸುತ್ತಿರುವುದರಿಂದ ಬೀದಿಬದಿ ವ್ಯಾಪಾರಿಗಳು ಕೊಂಚ ನಿಟ್ಟುಸಿರು ಬಿಡುವಂತಾಗಿದೆ.

ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ನಿರ್ದೇಶನಗಳನ್ನು ಡಿಸಿ, ಪುರಸಭೆ, ಪೊಲೀಸ್ ಅಧಿಕಾರಿಗಳಿಗೆ ತಲುಪಿಸುವಂತೆ ಸೂಚಿಸಲಾಗಿದ್ದು, ಈ ಕುರಿತು ಕ್ರಮ ತೆಗೆದುಕೊಂಡ ಬಗ್ಗೆ ಅಕ್ಟೋಬರ್ 18ರೊಳಗೆ ಮಾಹಿತಿ ನೀಡುವಂತೆಯೂ ತಿಳಿಸಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button