Belagavi NewsBelgaum NewsCrimeKannada NewsKarnataka News

*ರಸ್ತೆ ಬದಿ ನಿಂತಿದ್ದ ಬೈಕ್ ಸವಾರನಿಗೆ ಡಿಕ್ಕಿ ಹೊಡೆದ ಬೈಕ್: ಓರ್ವ ಸಾವು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೈಕ್ ನಿಲ್ಲಿಸಿ ರಸ್ತೆ ಬದಿಗೆ ನಿಂತಿದ್ದ ವ್ಯಕ್ತಿಗೆ ಮತ್ತೊಂದು ಬೈಕ್ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸ್ಥಳದಲ್ಲೆ ಸಾವುವನ್ನಪ್ಪಿದ್ದಾರೆ.

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಕೆಂಗಾನೂರ ಗ್ರಾಮದ ಬಳಿ ನಡೆದ ಘಟನೆ ನಡೆದಿದ್ದು,ಈ ಅಪಘಾತದಲ್ಲಿ ಬೈಲಹೊಂಗಲ ತಾಲೂಕಿನ ನಯಾನಗರ ಗ್ರಾಮದ ಬಾಲಪ್ಪ ನಾಗಪ್ಪ ಉಳ್ಳಿಗೇರಿ (63) ಸಾವನ್ನಪ್ಪಿದ್ದಾರೆ.‌

Home add -Advt

ಗಂಭೀರವಾಗಿ ಗಾಯಗೊಂಡ ಬಾಲಪ್ಪ ಅವರನ್ನು ತಕ್ಷಣ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಿಸದೆ ಅವರು ಸಾವನ್ನಪ್ಪಿದ್ದಾರೆ.‌ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ‌ ಪರಿಶೀಲನೆ ನಡೆಸಿದ್ದಾರೆ.  ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. 

Related Articles

Back to top button