Latest

ಶಾಂತಿ, ಸಾಮರಸ್ಯ ಕದಡುವ ಸಂಘಟನೆಗಳ ಮೇಲೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಸಮಾಜದಲ್ಲಿ ಶಾಂತಿ ಹಾಗೂ ಸಾಮರಸ್ಯ ಕದಡುವ ಕೆಲಸ ಮಾಡುವ ಯಾವುದೇ ಸಂಘಟನೆಯ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಹೇಳಿದರು.

ಅವರು ಇಂದು ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ ಅವರ 59 ನೇ ಪುಣ್ಯ ತಿಥಿಯ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

“ಸಂಘ ಪರಿವಾರ ನಿಷೇಧ ಮಾಡುವ ಬಗ್ಗೆ ಸರ್ಕಾರ ಹೇಳಿಲ್ಲ ಎಂದು ಸ್ಪಷ್ಟಪಡಿಸಿದ ಮುಖ್ಯಮಂತ್ರಿಗಳು, ಹೊಸ ಸಂಪುಟದಲ್ಲಿ ಇಂದು ಅಥವಾ ನಾಳೆ ಖಾತೆಗಳ ಹಂಚಿಕೆ ಮಾಡಲಾಗುವುದು” ಎಂದರು.

ಇದೇ ವೇಳೆ ಅವರು ಪಂಡಿತ್ ಜವಾಹರಲಾಲ್ ನೆಹರೂ ಅವರ 59ನೇಯ ಪುಣ್ಯತಿಥಿ ಅಂಗವಾಗಿ ಕೆಪಿಸಿಸಿ ಕಚೇರಿಯಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

Home add -Advt

ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಚಿವ ಕೆ.ಎಚ್. ಮುನಿಯಪ್ಪ ಹಾಗೂ ಇನ್ನಿತರ ನಾಯಕರು ಉಪಸ್ಥಿತರಿದ್ದರು.

https://pragati.taskdun.com/be-careful-when-cleaning-schools-cobra-found-in-basalpur-school/
https://pragati.taskdun.com/gold-and-silver-prices-continue-to-fluctuate-again/
https://pragati.taskdun.com/the-officer-emptied-the-reservoir-for-the-mobile-phone/

Related Articles

Back to top button