ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ನಗರ ಪ್ರದೇಶ ವ್ಯಾಪ್ತಿಯಲ್ಲಿ ಪಾದಚಾರಿಗಳ ಸುಗಮ ಸಂಚಾರಕ್ಕೆ ಅಡಚಣೆಯಾಗುವಂತಹ ರಸ್ತೆಗಳಲ್ಲಿ ಕಾನೂನು ಬಾಹಿರವಾಗಿ ವಾಹನ ಚಾಲನೆ, ನಿಲುಗಡೆ ಮಾಡುವಂತಹ ವಾಹನಗಳ ವಿರುದ್ದ ಮೋಟಾರು ವಾಹನ ಕಾಯ್ದೆ ಅಡಿಯಲ್ಲಿ ಪೊಲೀಸ್ ಇಲಾಖೆ ವತಿಯಿಂದ ಕ್ರಮಗಳನ್ನು ಕೈಕೊಳ್ಳಲಾಗುತ್ತದೆ ಎಂದು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ಸಾರ್ವಜನಿಕರು ನಗರ ಪ್ರದೇಶದಲ್ಲಿರುವ ಎಲ್ಲ ಪಾದಚಾರಿ (ಫುಟ್‌ಪಾತ್) ಮಾರ್ಗಗಳನ್ನು ಮುಕ್ತವಾಗಿರಿಸಿ, ಜಾಗೃತರಾಗಿ ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಿಕೊಂಡು ಬರುವಂತೆ ಕೋರಲಾಗಿದೆ. ಒಂದು ವೇಳೆ ನಿಯಮ ಉಲ್ಲಂಘಿಸಿದಲ್ಲಿ ತಪ್ಪಿತಸ್ಥರ ವಿರುದ್ಧ ಕರ್ನಾಟಕ ಪೊಲೀಸ್ ಕಾಯ್ದೆ-1963 ರ ಕಲಂ, 92(ಜಿ): ಯಾವುದೇ ಪಾದಚಾರಿ ಮಾರ್ಗದಲ್ಲಿ ವಾಹನವನ್ನು ಬಿಡುವುದು ಅಥವಾ ಓಡಿಸುವುದು, ಯಾವುದೇ ವಾಹನವನ್ನು ಅಲ್ಲಿಗೆ ಎಳೆಯುವುದು ಅಥವಾ ತಳ್ಳುವುದು. ಭಾರತೀಯ ದಂಡ ಸಂಹಿತೆ ಕಲಂ 283 ರಡಿಯಲ್ಲಿ ಯಾವುನೇ ವ್ಯಕ್ತಿ ಸಾರ್ವಜನಿಕ ಮಾರ್ಗದಲ್ಲಿ ಅಥವಾ ಸ್ಥಳದಲ್ಲಿ ಯಾವುದೇ ಸಾರ್ವಜನಿಗೆ ವ್ಯಕ್ತಿಗೆ ಅಪಾಯದ ಅಡಚಣೆ ಉಂಟು ಮಾಡುವುದು. ಪಾದಚಾರ ರಸ್ತೆಗಳಲ್ಲಿ ಕಾನೂನು ಬಾಹಿರವಾಗಿ ವಾಹನ ಚಾಲನೆ, ನಿಲುಗಡೆ ಮಾಡಿದಲ್ಲಿ, ಅಂಥವರ ವಿರುದ್ಧ ಕಟ್ಟುನಿಟ್ಟನ ಕ್ರಮಗಳನ್ನು ಕೈಗೊಳ್ಳಲಾಗುವುದು.
ಕಾರಣ ಪಾದಚಾರಗಳ ಹಿತದೃಷ್ಟಿಯಿಂದ ಯಾವುದೇ ವಾಹನ ಚಾಲಕರು/ ವ್ಯಾಪಾರಸ್ಥರು ಪಾದಚಾರಿ ಮಾರ್ಗಗಳಲ್ಲಿ ಅಡಚಣೆ ಉಂಟು ಮಾಡದಂತೆ ಎಚ್ಚರವಹಿಸಿ ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಿಕೊಂಡು ಬರುವಂತೆ ಕೋರಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ