Karnataka News

*ಬೆತ್ತಲೆಗೊಳಿಸಿ ವಿಡಿಯೋ ಮಾಡಿ ಹಣಕ್ಕೆ ಬೇಡಿಕೆ: ಐವರು ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಹುಬ್ಬಳ್ಳಿ ನಗರದ ವ್ಯಾಪಾರಿಯೊಬ್ಬರ ಬೆತ್ತಲೆ ವಿಡಿಯೋ ಮಾಡಿಕೊಂಡು, ಹಣಕ್ಕೆ ಬೇಡಿಕೆ ಇಟ್ಟಿದ್ದ ಇಬ್ಬರು ಮಹಿಳೆ ಸೇರಿ ಐವರನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ಜೋಯಾ ನದಾಫ, ಪರ್ವಿನ ಬಳ್ಳಾರಿ, ಸಯ್ಯದ್ ತಹಶಿಲ್ದಾರ, ತೌಸಿಫ್, ಅಬ್ದುಲ್ ಬಂಧಿತರಾಗಿದ್ದಾರೆ. ಪಾತ್ರೆ‌ ವ್ಯಾಪಾರಿ ಚಗನ್‌ಲಾಲ್‌ ಎಂಬುವವರು ಈ ಗ್ಯಾಂಗ್‌ನಿಂದ ಮೋಸಕ್ಕೊಳಗಾಗಿದ್ದಾರೆ.‌ ಬಂಧಿತ ಜೋಯಾ, ಚಗನ್‌ಲಾಲ್‌ ಅವರ ಮೊಬೈಲ್‌ಗೆ ಕರೆಮಾಡಿ ಪರಿಚಯಿಸಿಕೊಂಡು ಉಣಕಲ್‌ ಕ್ರಾಸ್‌ಗೆ ಕರೆಸಿಕೊಂಡಿದ್ದಾಳೆ. ನಂತರ ರಾಜನಗರದ ಮನೆಗೆ ಕರೆದುಕೊಂಡು ಹೋಗಿ ಬೆತ್ತಲೆಗೊಳಿಸಿ ವಿಡಿಯೋ ಮಾಡಿಕೊಂಡಿದ್ದಾಳೆ. ತದನಂತರ ಐವರು ಸೇರಿ ಕೇಳಿದಷ್ಟು ಹಣ ನೀಡದಿದ್ದರೆ ವಿಡಿಯೋ ವೈರಲ್‌ ಮಾಡುವುದಾಗಿ ಹಣಕ್ಕೆ ಬೇಡಿಕೆ ಇಟ್ಟಿದ್ದಲ್ಲದೆ ಜೀವ ಬೆದರಿಕೆ ಹಾಕಿದ್ದಾರೆ.

ಈ ಕುರಿತು ಚಗನ್‌ಲಾಲ್‌‌ರು ಸೋಮವಾರ ಅಶೋಕನಗರ ಠಾಣೆಯಲ್ಲಿ ದೂರು ದಾಖಲಿಸಿದ್ದರು.ಈ ಹಿನ್ನೆಲೆಯಲ್ಲಿ ಪೊಲೀಸರು ಹನಿಟ್ರ್ಯಾಪ್‌ ತಂಡದ ಅವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇವರಿಂದ ಎರಡು ಬೈಕ್, ಐದು ಮೊಬೈಲ್ ಫೋನ್ಸ್, 9ಸಾವಿರ ರೂ. ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಡಿಸಿಪಿ ಮಹಾನಿಂಗ ನಂದಗಾಂವಿ ಮಾಹಿತಿ ನೀಡಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button