*ಆ.12 ರಂದು ಪ್ರಾಥಮಿಕ ಶಾಲಾ ಶಿಕ್ಷಕರಿಂದ ಹೋರಾಟ; 7ರಂದು ಬೆಳಗಾವಿಯಲ್ಲಿ ರ್ಯಾಲಿ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರಿಂದ ಆಗಸ್ಟ್ 12 ರಿಂದ ರಾಜ್ಯದ ಶಿಕ್ಷಕರು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೇತೃತ್ವದಲ್ಲಿ ಹೋರಾಟವನ್ನು ಆರಂಭ ಮಾಡಲಿದ್ದಾರೆ ಎಂದು ಬೆಳಗಾವಿ ಜಿಲ್ಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಜಯಕುಮಾರ್ ಹೆಬಳಿ ಹೇಳಿದರು.
ಬೆಳಗಾವಿ ನಗರದ ಸಾಹಿತ್ಯ ಭವನದಲ್ಲಿ ಬೆಳಗಾವಿ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ದಿಂದ ಕಾರ್ಯಕಾರಣಿ ಸಭೆ ನಡೆಸಲಾಯಿತು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಮೇಶ್ ಗೋಳಿ ಮಾತನಾಡಿ ರಾಜ್ಯದ ಪ್ರಾಥಮಿಕ ಸರ್ಕಾರಿ ಶಾಲೆಯ ಶಿಕ್ಷಕರ ಸ್ಥಿತಿ ಡೋಲಾಯಮಾನವಾಗಿದೆ , ರಾಜ್ಯದಲ್ಲಿ ಸುಮಾರು 80,000 ಪಿಎಸ್ ಟಿ ಶಿಕ್ಷಕರು ಬಿ.ಎ, ಬಿ.ಎಸ್ಸಿ, ಬಿ.ಎಡ್, ಎಂ.ಎ, ಎಂ.ಎಸ್ಸಿ, ಎಂ.ಎಡ್, ಎಂ.ಫಿಲ್, ಪಿ.ಎಚ್.ಡಿ ಪದವಿ ಪಡೆದಿದ್ದಾರೆ. ಆದರೂ ಇವರಿಗೆ ಬಡ್ತಿ ನೀಡುವ ಬದಲು ಹಿಂಬಡ್ತಿ ನೀಡಲಾಗಿದೆ. ಹೀಗಾಗಿ ಆಗಸ್ಟ್ 12 ರಿಂದ ರಾಜ್ಯದ ಶಿಕ್ಷಕರು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೇತೃತ್ವದಲ್ಲಿ ಹೋರಾಟವನ್ನು ಆರಂಭ ಮಾಡಲಿದ್ದಾರೆ. ಬೆಂಗಳೂರಿನ ಪ್ರೀಡಂ ಪಾರ್ಕ್ ನಲ್ಲಿ ಈ ಹೋರಾಟ ನಡೆಯಲಿದ್ದು ಶಕ್ತಿ ಪ್ರದರ್ಶನದ ಮೂಲಕ ರಾಜ್ಯದ ಸರ್ಕಾರಿ ಶಾಲೆಯ ಶಿಕ್ಷಕರು ತಮಗೆ ಆಗುತ್ತಿರುವ ಅನ್ಯಾಯದ ವಿರುದ್ಧ ಬೀದಿಗಿಳಿಯಲಿದ್ದು ರಾಜ್ಯದ ಮೂಲೆ ಮೂಲೆಗಳಿಂದ ಅಪಾರ ಸಂಖ್ಯೆಯಲ್ಲಿ ಶಿಕ್ಷಕರು ಈ ಹೋರಾಟದಲ್ಲಿ ಪಾಲ್ಗೊಂಡು ರಾಜ್ಯದ ಮಟ್ಟದ ಬೃಹತ್ ಪ್ರತಿಭಟನೆ ಮಾಡುತ್ತೇವೆ ಎಂದು ಹೇಳಿದರು.
ಬೆಳಗಾವಿ ಜಿಲ್ಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಜಯ ಕುಮಾರ್ ಹೆಬಳಿ ಮಾತನಾಡಿ, ಕರ್ನಾಟಕ ಪ್ರಾಥಮಿಕ ಶಿಕ್ಷಕರ ಸಂಘದಿಂದ ಇಂದು ಸಭೆ ನಡೆಸಲಾಯಿತು. ರಾಜ್ಯದಲ್ಲಿ ಸುಮಾರು 80,000 ಪಿಎಸ್ ಟಿ ಶಿಕ್ಷಕರು ಬಿ.ಎ, ಬಿ.ಎಸ್ಸಿ, ಬಿ.ಎಡ್, ಎಂ.ಎ, ಎಂ.ಎಸ್ಸಿ, ಎಂ.ಎಡ್, ಎಂ.ಫಿಲ್, ಪಿ.ಎಚ್.ಡಿ ಪದವಿ ಪಡೆದಿದ್ದಾರೆ. ಆದರೂ ಇವರಿಗೆ ಬಡ್ತಿ ನೀಡುವ ಬದಲು ಹಿಂಬಡ್ತಿ ನೀಡಲಾಗಿದೆ, ಆಗಷ್ಟ 5 ರಂದು ಜಿಲ್ಲೆಯ ಎಲ್ಲಾ ತಾಲೂಕಿನಲ್ಲಿ ತಹಶೀಲ್ದಾರ ಗೆ ಮನವಿ ಸಲ್ಲಿಸುತ್ತೇವೆ , ಆಗಷ್ಟ್ 7 ರಂದು ಬೆಳಗಾವಿ ನಗರದಲ್ಲಿ ಬೃಹತ್ ರ್ಯಾಲಿ ಮುಖಾಂತರ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಜಿಲ್ಲಾಧಿಕಾರಿಗಳಿಗೆ ಹೋರಾಟದ ಬಗ್ಗೆ ಮನವಿ ಸಲ್ಲಿಕೆ ಮಾಡುತ್ತೇವೆ, ಮನವಿಗೆ ಸ್ಪಂದನೆ ನೀಡದೆ ಹೋದರೆ ಆಗಷ್ಟ 12 ರಂದು ಬೆಂಗಳೂರಿನ ಪ್ರೀಡಂ ಪಾರ್ಕ್ ನಲ್ಲಿ ಬೃಹತ್ ಹೋರಾಟ ಮಾಡುತ್ತೇವೆ ಎಂದು ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ