Kannada NewsLatestNational

*ಪರೀಕ್ಷೆಗೆ ಹೆದರಿ ಶಾಲೆಗೆ ಬಾಂಬ್ ಬೆದರಿಕೆ ಸಂದೇಶ ರವಾನಿಸಿದ ವಿದ್ಯಾರ್ಥಿ*

ಪ್ರಗತಿವಾಹಿನಿ ಸುದ್ದಿ: ಹದಿನಾಲ್ಕು ವರ್ಷದ ವಿದ್ಯಾರ್ಥಿಯೊಬ್ಬ ತನ್ನ ಶಾಲೆಯನ್ನೇ ಸ್ಫೋಟಿಸುವುದಾಗಿ ಬೆದರಿಕೆ ಹಾಕಿರುವ ಘಟನೆ ಉತ್ತರಾಖಂಡದ ಉದಂಸಿಂಗ್‌ ನಗರದಲ್ಲಿ ನಡೆದಿದೆ.

ಕುದಂಪುರದ ಕಾಶಿಪುರದ ಬಾಜ್ಪುರದಲ್ಲಿ ಶಾಲಾ ಆಡಳಿತ ಮಂಡಳಿ ಬಾಂಬ್‌ ಸ್ಫೋಟದ ಇ-ಮೇಲ್‌ ಅನ್ನು ಸ್ವೀಕರಿಸಿ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿತ್ತು. ಪೊಲೀಸ್‌‍ ತಂಡ, ಶ್ವಾನದಳದ ಸಹಾಯದಿಂದ ನೈನಿತಾಲ್‌ ರಸ್ತೆಯಲ್ಲಿರುವ ಶಾಲಾ ಆವರಣದಲ್ಲಿ ಸಂಪೂರ್ಣ ಶೋಧ ನಡೆಸಿತ್ತು. ಯಾವುದೇ ಆನುಮಾನಸ್ಪದ ವಸ್ತು ಸಿಗದೇ ಹೋದ ಕಾರಣ ಇದು ಹುಸಿಬಾಂಬ್‌ ಬೆದರಿಕೆ ಎಂದು ಘೋಷಿಸಿದ್ದರು.

Home add -Advt

ಇ-ಮೇಲ್ ಆದರಿಸಿ ಶಾಲೆಯ ವಿದ್ಯಾರ್ಥಿಯೊಬ್ಬನನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಆತನೇ ಬಾಂಬ್ ಬೆದರಿಕೆ ಹಾಕಿರುವುದು ಬೆಳಕಿಗೆ ಬಂದಿದೆ. 14 ವರ್ಷದ ವಿದ್ಯಾರ್ಥಿಯನ್ನು ವಿಚಾರಣೆ ನಡೆಸಿದಾಗ ಆತ ಪರೀಕ್ಷೆಗೆ ಓದಲು ಸಾಧ್ಯವಾಗದಿದ್ದ ಹಿನ್ನೆಲೆಯಲ್ಲಿ ಶಾಲೆಗೆ ರಜೆ ನೀಡಲೆಂಬ ಕಾರಣಕ್ಕೆ ಹುಸಿ ಬಾಂಬ್‌ ಬೆದರಿಕೆಯ ಇ-ಮೇಲ್‌ ಕಳುಹಿಸಿದ್ದೆ ಎಂದು ವಿದ್ಯಾರ್ಥಿ ಒಪ್ಪಿಕೊಂಡಿದ್ದಾನೆ.

ಆತನನ್ನು ಕೌನ್ಸಲಿಂಗ್ ಮಾಡಿ ಪೋಷಕರಿಗೆ ಒಪ್ಪಿಸಲಾಗಿದೆ ಎಂದು ತಿಳಿದುಬಂದಿದೆ.

Related Articles

Back to top button