Belagavi NewsBelgaum NewsCrimeKannada NewsKarnataka NewsNationalPolitics
*ಬೆಳಗಾವಿಯ ಹಾಸ್ಟೆಲ್ನಲ್ಲಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿಯ ಅಜಂ ನಗರದಲ್ಲಿ ಇರುವ ಪರಿಶಿಷ್ಟ ಪಂಗಡಗಳ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದಲ್ಲಿ ಜನ್ಮದಿನದಂದೆ ವಿದ್ಯಾರ್ಥಿನಿ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ.
ಹುಕ್ಕೇರಿ ತಾಲೂಕಿನ ಕಟಾಬಳ್ಳಿ ಗ್ರಾಮದ ಕಾವೇರಿ ಉಮೇಶ ನಾಯಕ( 21) ಬಿಎಸ್ ಸಿ ಅಂತಿಮ ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಕಳೆದ ಮೂರು ತಿಂಗಳ ಹಿಂದಷ್ಟೇ
ಪೊಲೀಸ ಪೇದೆಯೊಂದಿಗೆ ಎಂಗೆಜ್ಮೆಂಟ್ ಆಗಿತ್ತು. ಮಗಳನ್ನ ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಘಟನಾ ಸ್ಥಳಕ್ಕೆ ಎಪಿಎಂಸಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.




