ಪ್ರಗತಿವಾಹಿನಿ ಸುದ್ದಿ: ಶಾಲೆಯ ಆವರಣದಲ್ಲಿದ್ದ ನೇರಳೆ ಹಣ್ಣು ಕೀಳಲು ಹೋಗಿ ವಿದ್ಯಾರ್ಥಿಯೊಬ್ಬ ವಿದ್ಯುತ್ ಶಾಕ್ ಹೊಡೆದು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರಿನ ಕಡೂರು ತಾಲೂಕಿನ ಮೊರಾರ್ಜಿದೇಸಾಯಿ ವಸತಿ ಶಾಲೆಯಲ್ಲಿ ನಡೆದಿದೆ.
7ನೇ ತರಗತಿ ವಿದ್ಯಾರ್ಥಿ ಆಕಾಶ್ ಮೃತ ಬಾಲಕ. ನಿನ್ನೆ ಸ್ನೇಹಿತರೊಂದಿಗೆ ಶಾಲೆಯ ಆವರಣದಲ್ಲಿದ್ದ ನೇರಳೆಹಣ್ಣಿನ ಮರದಿಂದ ನೇರಳೆಹಣ್ಣು ಕೀಳಲು ಹೋಗಿದ್ದ. ಮರ ಹತ್ತಿದ್ದ ಬಾಲಕ ಜಾರಿ ಬೀಳುವಂತಾಗಿದ್ದ. ಬೀಳುವ ವೇಳೆ ಪಕ್ಕದಲ್ಲಿದ್ದ ವಿದ್ಯುತ್ ತಂತಿ ಹಿಡಿದುಕೊಂಡಿದ್ದಾನೆ. ವಿದ್ಯುತ್ ಪ್ರವಹಿಸಿ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದ.
ಶಾಲಾ ಆವರಣದಲ್ಲಿಯೇ ವಿದ್ಯುತ್ ತಂತಿ ನೇತಾಡುತ್ತಿದ್ದರೂ ಶಾಲಾ ಸಿಬ್ಬಂದಿಗಳು ಬೇಜವಾಬ್ದಾರಿ ಮೆರೆದಿದ್ದಾರೆ ಎಂದು ಪ್ರಭಾರ ಪ್ರಾಂಶುಪಾಲ, ನಿಲಯ ಪಾಲಕ ಸೇರಿ 8 ಸಿಬ್ಬಂದಿಗಳನ್ನು ಅಮಾನತು ಮಡಿ ಕಾರ್ಯನಿರ್ವಹಕ ನಿರ್ದೇಶಕ ಪ್ರವೀಣ್ ಬಿ ಬಾಗೇವಾಡಿ ಆದೇಶ ಹೊರಡಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ